Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರ ಸಮಸ್ಯೆಆಲಿಸಲು ಜನರ ಮನೆ ಬಾಗಿಲಿಗೆ...

ಸರಕಾರ ಸಮಸ್ಯೆಆಲಿಸಲು ಜನರ ಮನೆ ಬಾಗಿಲಿಗೆ ಬರಲಿದೆ: ಮಲ್ಲಿಕಾರ್ಜುನ್‌

ಜನಮನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ18 Sept 2016 10:24 PM IST
share

ದಾವಣಗೆರೆ, ಸೆ.18: ಅಧಿಕಾರಿಗಳು ಜನಸಾಮಾನ್ಯರ ಯಾವುದೇ ಸಮಸ್ಯೆಗಳಿಗೆ 24 ಗಂಟೆಗಳೊಳಗೆ ಸ್ಪಂದಿಸಬೇಕು. ಅವರ ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ಕಲ್ಪಿಸಬೇಕು. ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ಯಾವುದೇ ದೂರು ಬರದಂತೆ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಸರಕಾರದ ಯೋಜನೆಯ ಫಲಾನುಭವಿಗಳೊಂದಿಗೆ ಹಮ್ಮಿಕೊಂಡಿದ್ದ ಜನಮನ ಕಾರ್ಯಕ್ರಮದಲ್ಲಿ ಅವರು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿ ಮಾತನಾಡಿದರು.

ಸರಕಾರ ಅನೇಕ ಉತ್ತಮ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರ, ದಲಿತರ, ಶೋಷಿತರ ಏಳ್ಗೆಗಾಗಿ ಶ್ರಮಿಸುತ್ತಿದೆ. ಆದರೆ, ಯೋಜನೆಗಳ ಅನುಷ್ಠಾನ, ಕಾರ್ಯವೈಖರಿಯಲ್ಲಿ ಕೆಲ ಸಣ್ಣಪುಟ್ಟ ಗೊಂದಲ, ಸಮಸ್ಯೆಗಳು ಇದ್ದು, ಮುಂದಿನ ದಿನಗಳಲ್ಲಿ ಈ ಯಾವುದೇ ಸಮಸ್ಯೆಗಳು ಇರದಂತೆ ನೋಡಿಕೊಂಡು ಯೋಜನೆ ಸಂಪೂರ್ಣವಾಗಿ ಫಲಾನುಭವಿಗಳಿಗೆ ದೊರಕುವಂತೆ ಮಾಡಬೇಕಾಗಿದೆ ಎಂದರು.

ಶೀಘ್ರವೇ ಸೂರು:

ಪೌರಕಾರ್ಮಿಕರು ಸೇರಿದಂತೆ ಅನೇಕ ಬಡವರು ಆಶ್ರಯ ಮನೆಗಾಗಿ ಬೇಡಿಕೆ ಸಲ್ಲಿಸುತ್ತಲೇ ಬಂದಿದ್ದಾರೆ. ಜಿಲ್ಲಾಡಳಿತ ಭೂಮಿ ಹುಡುಕಾಟದಲ್ಲಿ ತೊಡಗಿದೆ. ಭೂಮಿ ದರ ಹೆಚ್ಚಾದ ಹಿನ್ನೆಲೆಯಲ್ಲಿ ತುಸು ವಿಳಂಬವಾಗಿದ್ದು, ಶೀಘ್ರವೇ ಆಶ್ರಯ ಮನೆ, ನಿವೇಶನಗಳನ್ನು ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.

ಮಹತ್ವ ಯೋಜನೆಗಳಾದ ಅನ್ನಭಾಗ್ಯದಲ್ಲಿ 3.76 ಲಕ್ಷ ಜನತೆ, ಕ್ಷೀರಭಾಗ್ಯದಲ್ಲಿ 2.3 ಲಕ್ಷ ಮಕ್ಕಳು, ವಿದ್ಯಾಸಿರಿಯಲ್ಲಿ 10,766 ಫಲಾನುಭವಿಗಳು ಯೋಜನೆಗಳ ಸದುಪಯೋಗ ಪಡೆದುಕೊಂಡಿದ್ದಾರೆ ಎಂದರು.

ಬರಪೀಡಿತ ಜಿಲ್ಲೆ ಘೋಷಣೆಗೆ ಸರ್ವೇ:

ಈಗಾಗಲೇ ಜಿಲ್ಲೆಯನ್ನು ಬರಪೀಡಿದ ಜಿಲ್ಲೆ ಎಂದು ಘೋಷಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸರ್ವೇ ಕಾರ್ಯ ಆರಂಭಿಸಿದ್ದು, ಶೀಘ್ರವೇ ಇದರ ವರದಿಯನ್ನು ಕಂದಾಯ ಇಲಾಖೆಗೆ ಕಳುಹಿಸಲಾಗುವುದು ಎಂದ ಅವರು, ಆರೋಗ್ಯ ಚಿಕಿತ್ಸೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿದ್ದು, ಜಿಲ್ಲಾ ಆರೋಗ್ಯಾಧಿಕಾರಿಗಳು ಈ ನಿಟ್ಟಿನಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಎಲ್ಲರಿಗೂ ಉತ್ತಮ ಚಿಕಿತ್ಸೆ ಕೊಡಿಸುವ ಮೂಲಕ ಆರೋಗ್ಯವಂತ ಜಿಲ್ಲೆಯನ್ನಾಗಿಸಬೇಕು ಎಂದರು.

ವೇದಿಕೆಯಲ್ಲಿ ಜಿಪಂ ಅಧ್ಯಕ್ಷೆ ಉಮಾ ರಮೇಶ್, ವಿಪ ಸದಸ್ಯ ಕೆ. ಅಬ್ದುಲ್ ಜಬ್ಬಾರ್, ಮೇಯರ್ ಅಶ್ವಿನಿ ವೇದಮೂರ್ತಿ, ಜಿಪಂ ಉಪಾಧ್ಯಕ್ಷ ಸಿದ್ದಪ್ಪ, ಉಪ ಮೇಯರ್ ಗೌಡ್ರು ರಾಜಶೇಖರ್, ಜಿಲ್ಲಾಧಿಕಾರಿ ಎಸ್.ಡಿ. ರಮೇಶ್, ಎಸ್‌ಪಿ ಭೀಮಾಶಂಕರ್ ಎಸ್. ಗುಳೇದ್, ಅಪಾರ ಜಿಲ್ಲಾಧಿಕಾರಿ ಇಬ್ರಾಹೀಂ ಮೈಗೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಅಶೋಕ್‌ಕುಮಾರ್. ಡಿ ಮತ್ತಿತರರು ಉಪಸ್ಥಿತರಿದ್ದರು.

3 ತಿಂಗಳಿಗೊಮೆ್ಮ ಜನಮನ:

ಜನಮನದಲ್ಲಿ ಸರಕಾರವೇ ಜನರ ಮನೆ ಬಾಗಿಲಿಗೆ ಬರುವಂತಾಗಿದ್ದು, ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಸ್ಥಳದಲ್ಲೇ ಪರಿಹಾರ ಸೂಚಿಸುವ ಹಿನ್ನೆಲೆಯಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದು, ಇನ್ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ಜನಮನ ಕಾರ್ಯಕ್ರಮ ಏರ್ಪಡಿಸಲಾಗುವುದು - ಎಸ್.ಎಸ್. ಮಲ್ಲಿಕಾರ್ಜುನ

ಜಿಲ್ಲಾ ಉಸ್ತುವಾರಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X