‘ಒಂದಾದರೂ ಗಿಡ ನೆಟ್ಟು ಪರಿಸರ ಸಂರಕ್ಷಿಸಿ’
ಕೋಟ, ಸೆ.18: ಪ್ರತಿಯೊಂದು ಮನೆಯಲ್ಲಿ ಕನಿಷ್ಠ ಒಂದಾದರೂ ಗಿಡ ನೆಟ್ಟು ಅದನ್ನು ಪೋಷಿಸುವ ಕೆಲಸ ಮಾಡುವುದರ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕಾಗಿದೆ ಎಂದು ಉಡುಪಿ ಬಿಷಪ್ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.
ಸಾಸ್ತಾನ ಸಂತ ಅಂತೋನಿ ಚರ್ಚ್‌ಗೆ ಮೂರು ದಿನಗಳ ಅಧಿಕೃತ ಭೇಟಿ ಹಾಗೂ ಚರ್ಚ್‌ನ ಒಂಬತ್ತು ವಿದ್ಯಾರ್ಥಿಗಳಿಗೆ ಧೃಡೀಕರಣದ ಸಂಸ್ಕಾರವನ್ನು ರವಿವಾರ ನೀಡಿ ಅವರು ಆಶೀರ್ವಚನಗೈದರು. ಇಂದು ನಾವು ಬದುಕುತ್ತಿರುವ ಪರಿಸರ ಸಂಪೂರ್ಣ ಕಲುಷಿತಗೊಂಡಿದೆ. ಸೇವಿಸುವ ಗಾಳಿ, ಆಹಾರ ನೀರು ಪ್ರತಿಯೊಂದು ವಿಷಯುಕ್ತವಾಗುತ್ತಿದೆ. ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನ ಜಗತ್ತನ್ನು ತಲ್ಲಣಗೊಳಿಸುತ್ತಿದೆ. ಪರಿಸರದ ನಾಶ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದರು.
ಈ ಸಂದರ್ಭ ಧರ್ಮಗುರು ವಂ.ಜಾನ್ ವಾಲ್ಟರ್ ಮೆಂಡೊನ್ಸಾ ಮತ್ತಿತರರು ಉಪಸ್ಥಿತರಿದ್ದರು.
Next Story





