ಇದೊಂದು ಸರಕಾರಿ ಪ್ರಾಯೋಜಿತ ವರದಿ: ಶೆಟ್ಟರ್
ಹುಬ್ಬಳ್ಳಿ, ಸೆ. 18: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಇಬ್ಬರು ಅಧಿಕಾರಿಗಳಿಗೆ ಕ್ಲೀನ್‌ಚಿಟ್ ನೀಡಿದ್ದು, ಇದೊಂದು 'ಸರಕಾರಿ ಪ್ರಾಯೋಜಿತ ವರದಿ' ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಇಂದಿಲ್ಲಿ ಆರೋಪಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಐಡಿ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಸರಕಾರ ತಮಗೆ ಬೇಕಾದಂತೆ ವರದಿ ಸಿದ್ಧಪಡಿಸಿದ್ದು, ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.
ತನಿಖಾಧಿಕಾರಿಗಳ ತಂಡ ಮಡಿಕೇರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎ.ಎನ್.ಪ್ರಸಾದ್ ಹಾಗೂ ಪ್ರಣಬ್ ಮೊಹಂತಿ ವಿರುದ್ಧ ಯಾವುದೇ ಸಾಕ್ಷಾಧಾರಗಳಿಲ್ಲ ಎಂದು ಉಲ್ಲೇಖಿಸಿದೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಸಿದ್ದ ಸರಕಾರ, ಒತ್ತಡದ ಹಿನ್ನಲೆಯಲ್ಲಿ ಒಲ್ಲದ ಮನಸ್ಸಿನಿಂದ ಸಿಐಡಿಗೆ ವಹಿಸಿತ್ತು ಎಂದು ಟೀಕಿಸಿದರು.
Next Story





