Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಗಳು ರೆತರನ್ನು ಹಗಲು ದರೋಡೆ...

ಸರಕಾರಗಳು ರೆತರನ್ನು ಹಗಲು ದರೋಡೆ ಮಾಡುತ್ತಿವೆ: ಕೋಡಿಹಳ್ಳಿ

ಬೈಕ್ ರ್ಯಾಲಿ

ವಾರ್ತಾಭಾರತಿವಾರ್ತಾಭಾರತಿ19 Sept 2016 10:05 PM IST
share
ಸರಕಾರಗಳು ರೆತರನ್ನು ಹಗಲು ದರೋಡೆ ಮಾಡುತ್ತಿವೆ:  ಕೋಡಿಹಳ್ಳಿ

  ಕಡೂರು, ಸೆ.19: ತೆಂಗು, ಕೊಬ್ಬರಿ ಹಾಗೂ ಅಡಿಕೆ ಬೆಳೆಗಳಿಗೆ ಬೆಂಬಲ ದರ ನಿಗದಿಗೊಳಿಸುವ ಮೂಲಕ ರೈತರ ಬೆಳೆಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಖರೀದಿಸಬೇಕೆಂದುಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಸೋಮವಾರ ಕಡೂರಿನಿಂದ ವಿಧಾನಸೌಧದವರೆಗೆ ಬೈಕ್ ರ್ಯಾಲಿ ಆರಂಭಿಸಿದರು.

ರೈತರಿಗಿಂತ ಅತ್ಯಧಿಕ ಪೊಲೀಸರು ಸರ್ಪಕಾವಲಿದ್ದು, ಬೈಕ್ ರ್ಯಾಲಿ ಪ್ರಾರಂಭವಾಗಿ ಕಡೂರು ಕೃಷಿ ಮಾರುಕಟ್ಟೆಯ ಗೇಟಿಗೆ ಆಗಮಿಸುತ್ತಿದ್ದಂತೆ ರ್ಯಾಲಿಯನ್ನು ತಡೆದ ಪೊಲೀಸರು, ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವಾರು ಮುಖಂಡರು ಹಾಗೂ 200ಕ್ಕೂ ಹೆಚ್ಚು ರೈತರನ್ನು ಬಂಧಿಸಿ ರ್ಯಾಲಿಯನ್ನು ಹತ್ತಿಕ್ಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಅಡಿಕೆ ಬೆಲೆ ಕುಸಿದಿದೆ. ಭಾರತ ಸರಕಾರ ಅಡಿಕೆಗೆ ಬೆಂಬಲ ಬೆಲೆ ನಿಷೇಧಿಸಿದೆ. ಆ.10 ರಂದು ಬೆಂಬಲ ಬೆಲೆಗಾಗಿ ತಿಪಟೂರಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಗುಬ್ಬಿ ಸಮೀಪ ಪಾದಯಾತ್ರೆ ಆಗಮಿಸುತ್ತಿದ್ದಂತೆ ಸಚಿವರಾದ ಜಯಚಂದ್ರ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್‌ರವರು ಆಗಮಿಸಿ ಪಾದಯಾತ್ರೆ ಬೇಡ, ಸರ್ವಪಕ್ಷಗಳ ಸಭೆ ಕರೆಯಲು ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂಬ ಭರವಸೆ ನೀಡಿದ್ದರು.

 ಇದರ ಮೇರೆಗೆ ಪಾದಯಾತ್ರೆ ಕೈಬಿಡಬೇಕಾಯಿತು. ಸರ್ವಸದಸ್ಯರ ಸಭೆಯಲ್ಲಿ ಕೇಂದ್ರ ಸಚಿವರಾದ ಅನಂತ್‌ಕುಮಾರ್‌ರವರು ಪ್ರಧಾನಮಂತ್ರಿ ಜೊತೆ ಚರ್ಚಿಸಿ ದರ ನಿಗದಿಗೊಳಿಸುವ ಭರವಸೆ ನೀಡಿದರು. ಈ ಭರವಸೆಯು ಸುಳ್ಳಾಯಿತು. ಕೇಂದ್ರ ಸರಕಾರ ನೌಕರರಿಗೆ ಶೇ. 23 ವೇತನ ಹೆಚ್ಚಿ

 ಸುತ್ತದೆ. ಆದರೆ ಈ ಸರಕಾರಗಳಿಗೆ ರೈತರ ಬಗ್ಗೆ ಕಾಲಜಿ ಇಲ್ಲವಾಗಿದೆ ಎಂದು ಹೇಳಿದರು. ಕಳೆದ 30 ವರ್ಷಗಳಿಂದ ತೆಂಗು, ಕೊಬ್ಬರಿ ಬೆಲೆ ಒಂದೇ ರೀತಿ ಇದೆ. ಸರಕಾರ ನೌಕರರ ವೇತನವನ್ನು 5 ವರ್ಷಕ್ಕೊಮ್ಮೆ ಹೆಚ್ಚಿಸಲಿದೆ. ರೈತರು ಬೆಳೆದ ಬೆಳೆಗಳ ದರ ನಿಗದಿ ಮಾಡಲು ಯಾವುದೇ ಸರಕಾರ ಪ್ರಯತ್ನಿಸುವುದಿಲ್ಲ. ರೈತರನ್ನು ಸರಕಾರಗಳು ಹಗಲು ದರೋಡೆ ಮಾಡುತ್ತಿವೆ. ರೈತರು ಬೀದಿಗೆ ಇಳಿಯಬೇಕಾಗಿದೆ. ಈಗ ಪೊಲೀಸರ ಮೂಲಕ ಬೈಕ್ ರ್ಯಾಲಿಯನ್ನು ಹತ್ತಿಕ್ಕಲು ಸರಕಾರ ಪ್ರಯತ್ನಿಸುತ್ತಿದೆ. ನಮ್ಮದು ಪೊಲೀಸರ, ರೈತರ ಮಧ್ಯೆ ಹೋರಾಟ ಅಲ್ಲ ಎಂದರು.

ಕಾವೇರಿ ವಿಷಯದ ಬಗ್ಗೆ ಪ್ರಧಾನಿ ಮಧ್ಯ ಪ್ರವೇಶ ಮಾಡಬೇಕಿದೆ. ಮಾತುಕತೆಯ ಮೂಲಕ ಈ ಸಮಸ್ಯೆ ಬಗೆಹರಿಯಬೇಕಿದೆ. ಕುಡಿಯುವ ನೀರಿಗೆ ಆದ್ಯತೆ ನೀಡಿ ನೀರಿನ ಹಂಚಿಕೆ ಮಾಡಬೇಕಿದೆ. ಎಲ್ಲ ಸಮಸ್ಯೆ ನಿವಾರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಫಲರಾಗಿದ್ದಾರೆ. ಪೊಲೀಸರ ಬಲವನ್ನು ಪುಂಡರಿಗೆ ತೋರಿಸಲಿ. ನಾವುಗಳು ಹೊಲಗಳಲ್ಲಿ ಕೆಲಸ ಮಾಡುವವರು ಬಸ್ಸಿಗೆ ಬೆಂಕಿ ಹಚ್ಚುವ ಕೆಲಸ ನಮ್ಮದಲ್ಲ. ಮುಂದೆಯೂ ಹೋರಾಟ ಮುಂದುವರಿಯಲಿದೆ ಎಂದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಂಜೇಗೌಡ, ಕೊಪ್ಪಳದ ಹನುಮಂತಪ್ಪ, ತಿಪಟೂರಿನ ಸತೀಶ್, ಮಹೇಶ್ವರಪ್ಪ, ನಿರಂಜನಮೂರ್ತಿ, ಜಗದೀಶ್, ಗಂಗಾಧರಪ್ಪ, ಸಿಂಗಟಗೆರೆ ನಾಗರಾಜು, ಶೆಟ್ಟಿಹಳ್ಳಿ ಮಲ್ಲಿಕಾರ್ಜುನ್ ಹಾಗೂ ಜೆಡಿಎಸ್‌ಕಡೂರು ಘಟಕದ ಅಧ್ಯಕ್ಷರಾದ ಭಂಡಾರಿ ಶ್ರೀನಿವಾಸ್, ಬಿದರೆ ಜಗದೀಶ್‌ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X