Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೋಧರಿಗೆ ಅಗ್ನಿ ಪ್ರತಿರೋಧಕ ಟೆಂಟ್ ಯಾಕೆ...

ಯೋಧರಿಗೆ ಅಗ್ನಿ ಪ್ರತಿರೋಧಕ ಟೆಂಟ್ ಯಾಕೆ ನೀಡಲಾಗಿಲ್ಲ?

ವಾರ್ತಾಭಾರತಿವಾರ್ತಾಭಾರತಿ19 Sept 2016 11:57 PM IST
share

ಜಮ್ಮು, ಸೆ.19: ಉರಿ ಸೇನಾ ನೆಲೆಯ ಮೇಲೆ ರವಿವಾರ ನಡೆದ ಉಗ್ರ ದಾಳಿಯಲ್ಲಿ ಹತರಾದ 17 ಸೈನಿಕರಲ್ಲಿ 14 ಸೈನಿಕರು ತಮ್ಮ ಟೆಂಟ್‌ಗಳಲ್ಲಿ ಮಲಗಿದ್ದಲ್ಲೇ ಸುಟ್ಟು ಕರಕಲಾದ ಹಿನ್ನೆಲೆಯಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ. ಅತ್ಯಂತ ಅಪಾಯಕಾರಿ ಪ್ರದೇಶದಲ್ಲಿರುವ ಈ ಸೇನಾ ನೆಲೆಯಲ್ಲಿ ಸೈನಿಕರನ್ನು ಟೆಂಟ್‌ಗಳಲ್ಲೇಕೆ ರಾತ್ರಿ ಸಮಯದಲ್ಲಿ ಉಳಿಸಲಾಗುತ್ತಿದೆ ಎಂಬ ಪ್ರಶ್ನೆ ಎದುರಾಗಿದೆ. ಅಂತೆಯೇ ಟೆಂಟ್‌ಗಳಲ್ಲಿಯೇ ಅವರು ರಾತ್ರಿ ಕಳೆಯುವಂತೆ ಮಾಡಲಾಗುತ್ತಿದ್ದರೂ ಯೋಧರಿಗೇಕೆ ಅಗ್ನಿ ಪ್ರತಿರೋಧಕ ಟೆಂಟ್‌ಗಳನ್ನು ನೀಡಲಾಗಿಲ್ಲವೆಂಬ ಪ್ರಶ್ನೆಯೂ ಎದ್ದಿದೆ.
ಈ ಉಗ್ರ ದಾಳಿಗೆ ಎಚ್ಚೆತ್ತು 6 ಬಿಹಾರ ಹಾಗೂ 10 ಡೋಗ್ರಾ ರೆಜಿಮೆಂಟ್‌ಗಳ ಯೋಧರು ಪ್ರತಿದಾಳಿ ನಡೆಸುವಷ್ಟರಲ್ಲಿ ನಮ್ಮ ಯೋಧರಿಗೆ ದೊಡ್ಡ ಹೊಡೆತ ಬಿದ್ದಾಗಿತ್ತು. ಅವರಿಗೆ ಅಗ್ನಿ ಪ್ರತಿರೋಧಕ ಟೆಂಟ್‌ಗಳನ್ನು ಒದಗಿಸಿದ್ದೇ ಆದಲ್ಲಿ ಇಂತಹ ದಾಳಿ ಸಂದರ್ಭದಲ್ಲಿ ಹೆಚ್ಚಿನ ಜೀವ ಹಾನಿ ತಪ್ಪಿಸಬಹುದೆಂಬ ಭಾವನೆಯಿದೆ.
 ಇಂತಹ ಹಲವು ದಾಳಿಗಳಿಗೆ ನಮ್ಮ ಸೇನಾ ಪಡೆಗಳು ಈ ಹಿಂದೆ ಕೂಡ ತುತ್ತಾಗಿವೆ ಹಾಗೂ ಈ ವರ್ಷ ಜೂನ್ 20ರವರಗೆ ಇಂತಹ ಕನಿಷ್ಠ 90 ಪ್ರಯತ್ನಗಳು ನಡೆದಿವೆ. ಹೀಗಿದ್ದೂ ನಮ್ಮ ರಕ್ಷಣಾ ಇಲಾಖೆ ದೇಶ ಕಾಯುವ ಯೋಧರಿಗೆ ರಾತ್ರಿ ಕಳೆಯಲು ನೀಡಿರುವ ಟೆಂಟ್‌ಗಳನ್ನು ನೀರು ನಿರೋಧಕವನ್ನಾಗಿಸುವ ಯತ್ನದಲ್ಲಿ ಅವುಗಳಿಗೆ ಸುಲಭವಾಗಿ ಬೆಂಕಿ ಹತ್ತಬಲ್ಲ ಕೆಲ ರಾಸಾಯನಿಕಗಳಿಂದ ಲೇಪನ ಮಾಡಿರುವುದು ನಿಜಕ್ಕೂ ಆತಂಕಕಾರಿ.
   
ಈ ಬಗ್ಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಟ್ವೀಟ್ ಮಾಡಿ ಚರ್ಚೆಗೆ ಆಸ್ಪದ ನೀಡಿದ್ದಾರಲ್ಲದೆ ಇಂತಹ ಟೆಂಟ್‌ಗಳಲ್ಲಿ ವಾಸಿಸುವುದರಿಂದ ಉಗ್ರರ ಗುಂಡಿನ ದಾಳಿ ನಡೆದಾಗ ಸೈನಿಕರಿಗೆ ಕ್ಷಿಪ್ರವಾಗಿ ಹಾಗೂ ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸುವುದು ಕಷ್ಟಕರವೆಂದು ಹೇಳಿದ್ದಾರೆ. ‘‘ಅಗ್ನಿ ಪ್ರತಿರೋಧಕ ಟೆಂಟ್‌ಗಳನ್ನು ಯೋಧರಿಗೆ ನೀಡುವುದು ನಮ್ಮ ಜವಾಬ್ದಾರಿಯಲ್ಲವೇ?’’ ಎಂದು ಪ್ರಶ್ನಿಸಿದ್ದಾರೆ. ‘‘ಸೇನೆ ತನ್ನ ಸಭಾಂಗಣಗಳನ್ನು ಹಾಗೂ ಕ್ವಾಟರ್ಸ್‌ಗಳನ್ನು ಆಧುನೀಕರಣಗೊಳಿಸಿದೆ ಯಾದರೂ ಜವಾನರನ್ನು ಹಿತಾಸಕ್ತಿಯನ್ನು ಲಘುವಾಗಿ ಪರಿಗಣಿಸಿದೆ’’ ಎಂದೂ ಅವರು ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X