ಕಾಸರಗೋಡು: ಸಿಐಟಿಯು ಜಿಲ್ಲಾ ಸಮ್ಮೇಳನ
ಕಾಸರಗೋಡು, ಸೆ.19: ನರೇಂದ್ರ ಮೋದಿ ನೇತೃತ್ವದ ಸರಕಾರ ಹಕ್ಕುಗಳನ್ನು ಕಸಿಯುವ ಮೂಲಕ ಕಾರ್ಮಿಕರನ್ನು ಬೀದಿಪಾಲು ಮಾಡುತ್ತಿದೆ ಎಂದು ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಪಿ. ನಂದಕುಮಾರ್ ಹೇಳಿದರು.
ಕಾಸರಗೋಡು ನಗರ ಸಭಾಂಗಣದಲ್ಲಿ ಸಿಐಟಿಯು ಜಿಲ್ಲಾ ಸಮ್ಮೇಳನವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಂಸತ್‌ನಲ್ಲಿ ಪ್ರತಿಪಕ್ಷಕ್ಕೂ ಬೆಲೆ ಕೊಡದೆ ಜನ ವಿರೋಧಿ ಮಸೂದೆಗಳನ್ನು ಜಾರಿಗೆ ತರುತ್ತಿದೆ. ಉದ್ಯೋಗ, ವೇತನ, ಉದ್ಯೋಗ ಸಮಯ, ಸಾಮಾಜಿಕ ಭದ್ರತೆ ಯೋಜನೆಗಳ ಕುರಿತು ಅನಿಶ್ಚಿತತೆ ಮುಂದುವರಿಯುತ್ತಿದೆ. ಕಾರ್ಮಿಕರ ಹಕ್ಕುಗಳನ್ನು ಕಸಿಯಲಾಗುತ್ತಿದೆ. ಸಾರ್ವಜನಿಕ ವಲಯ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದು ಅವರು ಟೀಕಿಸಿದರು.
ಸಿಐಟಿಯು ಮುಖಂಡ ಕೆ. ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಕೆ. ರಾಜನ್, ರಾಜ್ಯ ಕಾರ್ಯದರ್ಶಿ ಕೆ.ಪಿ. ಸಹದೇವನ್, ಜಿಲ್ಲಾ ಕೋಶಾಧಿಕಾರಿ ಯು. ತಂಬಾನ್ ನಾಯರ್, ಎನ್.ಟಿ. ಲಕ್ಷ್ಮೀ, ಸ್ವಾಗತ ಸಮಿತಿಯ ಅಧ್ಯಕ್ಷ ಸಿ.ಎಚ್. ಕುಞಾಂಬು, ಬೇಬಿ ಶೆಟ್ಟಿ ಉಪಸ್ಥಿತರಿದ್ದರು.





