ಗ್ರಾಮ ಪಂಚಾಯತ್ ಉಪಾಧ್ಯಕ್ಷನ ಬರ್ಬರ ಹತ್ಯೆ

ಬೆಂಗಳೂರು, ಸೆ.20: ಹಾಲನಾಯಕನ ಹಳ್ಳಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ಮಂಜುನಾಥ್(37 ವರ್ಷ) ಎಂಬುವವರ ಮೃತದೇಹ ಮಂಗಳವಾರ ಬೆಳಗ್ಗೆ ಕೃಷ್ಣಪ್ಪ ನಗರದ ಹೊರ ವಲಯದಲ್ಲಿ ಪತ್ತೆಯಾಗಿದೆ.
ಸರ್ಜಾಪುರ ನಿವಾಸಿ ಮಂಜುನಾಥ್‌ರನ್ನು ದುಷ್ಕರ್ಮಿಗಳು ತಡರಾತ್ರಿ ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಎಸ್‌ಎಸ್‌ಆರ್ ಪೊಲೀಸ್ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
Next Story





