Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಯಣ್ಣ ಹುಟ್ಟೂರಲ್ಲಿ ಶೌರ್ಯ ಅಕಾಡಮಿ...

ರಾಯಣ್ಣ ಹುಟ್ಟೂರಲ್ಲಿ ಶೌರ್ಯ ಅಕಾಡಮಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ20 Sept 2016 8:06 PM IST
share
ರಾಯಣ್ಣ ಹುಟ್ಟೂರಲ್ಲಿ ಶೌರ್ಯ ಅಕಾಡಮಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ. 20: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ‘ಶೌರ್ಯ ಅಕಾಡೆಮಿ’ ಸ್ಥಾಪಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ.

 ಮಂಗಳವಾರ ನಗರದ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಸಂಗೊಳ್ಳಿ ರಾಯಣ್ಣರ ಹುಟ್ಟೂರಲ್ಲಿ ಶೌರ್ಯ ಅಕಾಡೆಮಿ ಸ್ಥಾಪಿಸಲು ತೀರ್ಮಾನಿಸಲಾಗಿದೆ.

  ಸಂಗೊಳ್ಳಿ ರಾಯಣ್ಣ ಶೌರ್ಯ ಅಕಾಡೆಮಿಯು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಕಾರ್ಯ ನಿರ್ವಹಿಸಲಿದೆ. ಅಕಾಡೆಮಿ ಸ್ಥಾಪನೆಗೆ ಬೇಕಾದ 100 ಎಕರೆ ಜಮೀನಿನ ಸ್ವಾಧೀನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

   

   ರಾಯಣ್ಣ ಹೊಂದಿದ್ದ ಸ್ವಾಮಿ ನಿಷ್ಠೆ, ಶೌರ್ಯ, ದೇಶಾಭಿಮಾನ, ವಿಶ್ವಮಾನವ ಮೌಲ್ಯ, ಗುಣಗಳನ್ನು ಯುವ ಜನತೆಗೆ ಪರಿಚಯಿಸುವುದು ಅಕಾಡೆಮಿ ಸ್ಥಾಪನೆಯ ಉದ್ದೇಶವಾಗಿದ್ದು, ಈ ಅಕಾಡೆಮಿ ಯುವ ಸಬಲೀಕರಣ ಕೇಂದ್ರವಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕು. ಅದೇ ರೀತಿ, ರಾಯಣ್ಣ ಅವರ ಹುಟ್ಟೂರು, ಅವರನ್ನು ನೇಣುಗಂಬಕ್ಕೆ ಏರಿಸಿದ ಹಾಗೂ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ಈ ಹಿಂದೆ ಪ್ರತಿಷ್ಠಾನ ರಚಿಸಲಾಗಿತ್ತು. ಇಂದಿನ ಸಭೆಯಲ್ಲಿ ಪ್ರತಿಷ್ಠಾನವನ್ನು ಪ್ರಾಧಿಕಾರವನ್ನಾಗಿ ಬದಲಿಸುವ ನಿರ್ಣಯಕ್ಕೆ ಸಭೆ ಒಪ್ಪಿಗೆ ಸೂಚಿಸಿತು. ಅದೇ ರೀತಿ, ಸಭೆಯಲ್ಲಿ ಆಲದಮರ ಮತ್ತು ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಅಭಿವೃದ್ಧಿ ಪಡಿಸಲು, ಇದಕ್ಕಾಗಿ ಇತಿಹಾಸ ತಜ್ಞರನ್ನು ಒಳಗೊಂಡ ಸಮಿತಿ ರಚಿಸಲು ನಿರ್ಧರಿಸಲಾಯಿತು. ಪ್ರಾಧಿಕಾರದ ಕಚೇರಿ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನವನ್ನು ಪ್ರಾಧಿಕಾರವನ್ನಾಗಿ ಬದಲಿಸಿ ಅಭಿವೃದ್ಧಿ ಕಾಮಗಾರಿಗಳಿಗೆ 10 ಕೋಟಿ ರೂ. ಒದಗಿಸುವುದಾಗಿ ಮುಖ್ಯಮಂತ್ರಿಗಳು 2015-16ನೆ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದರು. ಅದರಂತೆ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಮುಖ್ಯಮಂತ್ರಿಯವರು ಸಭೆಯಲ್ಲಿ ಪರಿಶೀಲನೆ ನಡೆಸಿದರು.

   ನಂದಗಡದ ಎಪಿಎಂಸಿ ಯಾರ್ಡ್‌ನಲ್ಲಿ ರಾಯಣ್ಣ ಹೆಸರಿನಲ್ಲಿ ಸ್ಮಾರಕ ಭವನ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ 190 ಲಕ್ಷ ರೂ.ಗಳ ವೆಚ್ಚದಲ್ಲಿ ಯೋಜನೆ ರೂಪಿಸಿದೆ. ಈವರೆಗೆ 40 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

   ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಸಮಾಜ ಕಲ್ಯಾಣ ಸಚಿವ ಆಂಜನೇಯ, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ಬೆಳಗಾವಿ ಜಿಲ್ಲಾಧಿಕಾರಿ ಜಯರಾಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ದಯಾನಂದ್, ವಾರ್ತಾ ಇಲಾಖೆ ನಿರ್ದೇಶಕ ವಿಶುಕುಮಾರ್ ಸೇರಿ ಪ್ರಮುಖರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X