Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜಕೀಯ ಬದಿಗಿಟ್ಟು ಯೋಧರನ್ನು ರಕ್ಷಿಸಿ:...

ರಾಜಕೀಯ ಬದಿಗಿಟ್ಟು ಯೋಧರನ್ನು ರಕ್ಷಿಸಿ: ಸಿಪಿಐ ಕರೆ

ವಾರ್ತಾಭಾರತಿವಾರ್ತಾಭಾರತಿ20 Sept 2016 8:26 PM IST
share
ರಾಜಕೀಯ ಬದಿಗಿಟ್ಟು ಯೋಧರನ್ನು ರಕ್ಷಿಸಿ: ಸಿಪಿಐ ಕರೆ

ಮಂಗಳೂರು, ಸೆ. 20: ಕಾಶ್ಮೀರದ ಉರಿ ಸೇನಾ ನೆಲೆಗೆ ಉಗ್ರಗಾಮಿಗಳು ದಾಳಿ ನಡೆಸಿ ಹದಿನೆಂಟು ಸೈನಿಕರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ರಾಜಕೀಯ ಬದಿಗಿಟ್ಟು ಯೋಧರನ್ನು ರಕ್ಷಿಸಿ ದೇಶವನ್ನು ಉಳಿಸಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ದ.ಕ. ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್ ಆಗ್ರಹಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಯೋಧರ ಮೇಲೆ ನಡೆದ ದಾಳಿಯನ್ನು ಖಂಡಿಸಿ ನಗರದ ದ.ಕ. ಜಿಲ್ಲಾಧಿಕಾರಿ ಕಚೇರಿಯೆದುರು ನಡೆದ ಪ್ರತಿಭಟನಾ ಪ್ರದರ್ಶನವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಭಾರತ ಮತ್ತು ಪಾಕಿಸ್ತಾನದ ಆಡಳಿತದಾರರ ರಾಜಕೀಯ ಕುಟಿಲತೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದಿನಿಂದಲೂ ನಿರಂತರ ಅಶಾಂತಿ ಏರ್ಪಟ್ಟಿದೆ. ಇತ್ತೀಚಿನ ಎರಡು ತಿಂಗಳಿಂದ ಬಿಕ್ಕಟ್ಟು ಮತ್ತು ಅಶಾಂತಿ ಮತ್ತಷ್ಟು ಉಲ್ಬಣಗೊಂಡಿದೆ. ಕಳೆದ ರವಿವಾರ ಕಾಶ್ಮೀರದ ಉರಿ ಸೇನಾ ನೆಲೆಯಲ್ಲಿ ಮಲಗಿದ್ದ ಯೋಧರ ಮೇಲೆ ನಸುಕಿನ ಜಾವ ಸುಮಾರು ನಾಲ್ಕು ಗಂಟೆಯ ವೇಳೆ ಉಗ್ರಗಾಮಿಗಳು ಗ್ರೆನೇಡ್ ಮತ್ತು ಗುಂಡಿನ ದಾಳಿ ನಡೆಸಿ ಹದಿನೆಂಟು ಸೈನಿಕರನ್ನು ಹತ್ಯೆ ಮಾಡಿದ್ದಾರೆ. ಅಲ್ಲದೆ ಹಲವಾರು ಸೈನಿಕರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಪ್ತಚರ ಇಲಾಖೆಯ ವೈಫಲ್ಯವೇ ಇದಕ್ಕೆ ಮುಖ್ಯ ಕಾರಣವಾಗಿದೆಯೆಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ಏಕಾಧಿಪತ್ಯ ಮಾಡದೆ ಎಲ್ಲಾ ರಾಜಕೀಯ ಪಕ್ಷ ಮತ್ತು ರಾಜ್ಯ ಸರಕಾರದ ಮುಖ್ಯಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜಕೀಯ ಬದಿಗಿಟ್ಟು ಯೋಧರನ್ನು ರಕ್ಷಿಸಿ ದೇಶವನ್ನು ಉಳಿಸಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷದ ದ.ಕ. ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಎಚ್. ರಾವ್ ಮಾತನಾಡಿ, ಈ ಕೃತ್ಯದಲ್ಲಿ ಪಾಕಿಸ್ತಾನ ಭಾಗಿಯಾಗಿರುವುದು ಸ್ಪಷ್ಟವಾಗಿದೆ. ಅಂತಾರಾಷ್ಟ್ರೀಯವಾಗಿ ಪಾಕಿಸ್ತಾನವನ್ನು ಏಕಾಂಗಿ ಮಾಡುವ ರಾಜತಾಂತ್ರಿಕತೆಯನ್ನು ಭಾರತ ಸರಕಾರ ಮಾಡಬೇಕು. ವಿಶ್ವಸಂಸ್ಥೆಯಿಂದ ಛೀಮಾರಿ ಹಾಕಿಸಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವವರನ್ನು ದಂಡಿಸುವ ಬಗ್ಗೆ ಸರಕಾರ ಕಾರ್ಯಪ್ರವೃತ್ತವಾಗಬೇಕಾಗಿದೆ ಎಂದರು.

ಪ್ರಾರಂಭದಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಿ ಸರಕಾರಿ ಕೆಲಸದ ಭದ್ರತೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪಕ್ಷದ ಮಂಗಳೂರು ತಾಲೂಕು ಕಾರ್ಯದರ್ಶಿ ವಿ.ಎಸ್.ಬೇರಿಂಜ ಸ್ವಾಗತಿಸಿದರು. ಬಂಟ್ವಾಳ ತಾಲೂಕು ಕಾರ್ಯದರ್ಶಿ ಬಿ. ಶೇಖರ್ ವಂದಿಸಿದರು. ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ನಾಯಕರಾದ ಎ. ಪ್ರಭಾಕರ ರಾವ್, ಎಂ. ಕರುಣಾಕರ್, ಸುರೇಶ್ ಕುಮಾರ್, ಬಾಬು ಭಂಡಾರಿ, ಯು. ಭಾಸ್ಕರ್, ಕೆ. ಈಶ್ವರ್, ಚಂದ್ರಾವತಿ, ಸುಧಾಕರ್ ಕಲ್ಲೂರು, ಚಿತ್ರಾಕ್ಷಿ ಕುಂಜತ್ತ್‌ಬೈಲ್, ಭಾರತಿ ನರಿಕೊಂಬು, ಶಿವಪ್ಪ ಕೋಟ್ಯಾನ್, ಸರಸ್ವತಿ ಕಡೇಶಿವಾಲ್ಯ ಮುಂತಾದವರು ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X