Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲಿನಲ್ಲೇ ಶಿಶುವಿಗೆ ಜನ್ಮವಿತ್ತ ಮಹಿಳೆ

ರೈಲಿನಲ್ಲೇ ಶಿಶುವಿಗೆ ಜನ್ಮವಿತ್ತ ಮಹಿಳೆ

ರೈಲು ಪ್ರಯಾಣ ವಿಳಂಬವಾದರೂ ಜನರಲ್ಲಿ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ20 Sept 2016 10:54 PM IST
share

ಮುಂಬೈ, ಸೆ.20: ಸಾಮಾನ್ಯವಾಗಿ ರೈಲಿನ ಸಂಚಾರ ವಿಳಂಬವಾದಾಗ ಜನ ಅಸಹನೆಯಿಂದ ಕುದಿಯುತ್ತಾರೆ. ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಾರೆ. ಅದೂ ಬೆಳಗ್ಗಿನ ಗಡಿಬಿಡಿಯ ಅವಧಿಯಲ್ಲಿ ರೈಲು ಸಂಚಾರ ವಿಳಂಬವಾದರೆ ಕೇಳುವುದೇ ಬೇಡ. ಆದರೆ ರೈಲು ಸಂಚಾರ ವಿಳಂಬವಾದಾಗ ಪ್ರಯಾಣಿಕರು ಚಪ್ಪಾಳೆ ಹೊಡೆಯುತ್ತಾ ಹರ್ಷೋ ದ್ಗಾರ ಮಾಡಿದ ಅಪರೂಪದ ಘಟನೆ ಮುಂಬೈಯಲ್ಲಿ ನಡೆದಿದೆ.

 ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಆ ರೈಲು ಥಾಣೆ ರೈಲು ನಿಲ್ದಾಣದಿಂದ ಛತ್ರಪತಿ ಶಿವಾಜಿ ರೈಲುನಿಲ್ದಾಣಕ್ಕೆ ಬೆಳಗ್ಗಿನ ಅವಧಿಯಲ್ಲಿ ಸಂಚರಿಸುತ್ತಿತ್ತು. ಆ ರೈಲಿನ ಸಂಚಾರವನ್ನು ಕೆಲಹೊತ್ತು ವಿಳಂಬಗೊಳಿಸಲಾಯಿತು.ಪ್ರಯಾಣಿಕರು ಚಪ್ಪಾಳೆ ಹೊಡೆಯುತ್ತಾ ಹರ್ಷೋದ್ಗಾರ ಮಾಡುತ್ತಾ ಸಂಭ್ರಮದಲ್ಲಿದ್ದರು. ಕಾರಣ ಇಷ್ಟೇ.. ಓರ್ವ ಮಹಿಳೆ ರೈಲಿನಲ್ಲೇ ಶಿಶುವೊಂದಕ್ಕೆ ಜನ್ಮ ನೀಡಿದ್ದಳು. ಆ ರೈಲು ಮುಂಜಾನೆ 8:29ಕ್ಕೆ ಥಾಣೆ ನಿಲ್ದಾಣ ಪ್ರವೇಶಿಸಿ ಫ್ಲಾಟ್‌ಫಾರಂ 4ರಲ್ಲಿ ನಿಂತಿತ್ತು. ಅಷ್ಟರಲ್ಲಿ, ವಿಕಲಾಂಗರಿಗೆ ಮತ್ತು ಗರ್ಭಿಣಿ ಮಹಿಳೆಯರಿಗೆ ಮೀಸಲಾಗಿರುವ ರೈಲಿನ ಮಧ್ಯಭಾಗದ ಬೋಗಿಯಲ್ಲಿ ಗೊಂದಲ, ಗಡಿಬಿಡಿ ಆರಂಭವಾಯಿತು. ‘ಬೋಗಿಯ ಒಳಗೆ ಓರ್ವ ಮಹಿಳೆಗೆ ಹೆರಿಗೆ ನೋವು ಆರಂಭವಾಗಿದೆ ಎಂದು ನಮಗೆ ಕರೆ ಮಾಡಿ ತಿಳಿಸಲಾಯಿತು. ತಕ್ಷಣ ಆ್ಯಂಬುಲೆನ್ಸ್ ಮತ್ತು ಸ್ಟ್ರೆಚರ್‌ನ ವ್ಯವಸ್ಥೆ ಮಾಡಿ ರೈಲ್ವೇ ಸಿಬ್ಬಂದಿಯೊಂದಿಗೆ ನಾವು ಅಲ್ಲಿಗೆ ಧಾವಿಸಿದೆವು ಎಂದು ರೈಲ್ವೇ ಸುರಕ್ಷಾ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ಆದರೆ ಅಷ್ಟರಲ್ಲೇ ಬೋಗಿಯ ಒಳಗಡೆ ಆ ಮಹಿಳೆಗೆ ಹೆರಿಗೆಯಾಗಿದೆ. ಬೋಗಿಯಲ್ಲಿದ್ದ ಇತರ ಮಹಿಳೆಯರು ಆಕೆಯನ್ನು ಸುತ್ತುವರಿದರು ಮತ್ತು ಆಕೆಗೆ ನೆರವಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಹಿಳೆ ಮತ್ತು ನವಜಾತ ಶಿಶುವನ್ನು ಆ್ಯಂಬುಲೆನ್ಸ್‌ಗೆ ಸ್ಥಳಾಂತರಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಆಗುವವರೆಗೆ ರೈಲಿನ ಸಂಚಾರ ವನ್ನು ಸ್ಥಗಿತಗೊಳಿಸಲಾಗಿತ್ತು. ನಾನು ಫ್ಲಾಟ್‌ಫಾರಂ ತಲುಪಿದಾಗ ಅಲ್ಲಿ ಜನರು ಬೋಗಿಯನ್ನು ಸುತ್ತುವರಿದಿದ್ದರು. ಸ್ಟ್ರೆಚರ್‌ನಲ್ಲಿ ಶಿಶುವಿನೊಂದಿಗೆ ಮಹಿಳೆಯನ್ನು ಹೊರತರುತ್ತಿರುವಂತೆಯೇ ಜನರು ಚಪ್ಪಾಳೆ ತಟ್ಟುತ್ತಾ ಹರ್ಷೋದ್ಗಾರ ಮಾಡುತ್ತಿದ್ದರು ಎಂದು ಆ ರೈಲಿನಲ್ಲಿ ಪ್ರಯಾಣಿಸಲೆಂದು ಬಂದಿದ್ದ ಅನುಜಾ ಅಬ್ರಹಾಂ ಆ ಘಟನೆಯನ್ನು ವಿವರಿಸುತ್ತಾರೆ. ಸುಮಾರು 20 ನಿಮಿಷದ ವಿಳಂಬದ ಬಳಿಕ ರೈಲಿನ ಸಂಚಾರ ಆರಂಭಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X