ಸಂಸದ ಪ್ರತಾಪ್ ಸಿಂಹ ನಿವಾಸಕ್ಕೆ ಮುತ್ತಿಗೆ
ಕಾವೇರಿ ನದಿನೀರಿನ ಹಂಚಿಕೆ ವಿವಾದ

ಮೈಸೂರು, ಸೆ.21: ಕಾವೇರಿ ನದಿನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಹಾಗೂ ಕೇಂದ್ರ ಸರಕಾರ ಮಧ್ಯಪ್ರವೇಶಿಸದೇ ಇರುವುದನ್ನು ಪ್ರತಿಭಟಿಸಿ ತನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕಾವೇರಿ ಕ್ರಿಯಾ ಸಮಿತಿ ಕಾರ್ಯಕರ್ತರು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ನಿವಾಸಕ್ಕೆ ಮಂಗಳವಾರ ಮುತ್ತಿಗೆ ಹಾಕಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿ ಬಿಜೆಪಿಯ ಯಾವ ಜನಪ್ರತಿನಿಧಿಯೂ ರಾಜೀನಾಮೆ ನೀಡುವುದಿಲ್ಲ. ಅಂತರ್‌ರಾಜ್ಯ ನೀರಿನ ವಿವಾದಕ್ಕೆ ರಾಜೀನಾಮೆವೊಂದೇ ಪರಿಹಾರವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯುಡಿಯೂರಪ್ಪ ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಮಂಗಳವಾರ ನೀಡಿರುವ ತೀರ್ಪಗೆ ಆಕ್ರೋಶ ವ್ಯಕ್ತಪಡಿಸಿದ್ದ ಮಂಡ್ಯ ಜಿಲ್ಲೆಯ ಜೆಡಿಎಸ್ ಸಂಸದ ಸಿ.ಎಸ್. ಪುಟ್ಟರಾಜು ಸೋಮವಾರ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮದ್ದೂರು ಶಾಸಕ ಡಿ.ಸಿ. ತಮ್ಮಣ್ಣ ರಾಜೀನಾಮೆಯ ಇಂಗಿತ ವ್ಯಕ್ತಪಡಿಸಿದ್ದು, ಬಿಜೆಪಿಯ ಸಂಸದ, ಶಾಸಕರು ರಾಜೀನಾಮೆ ನೀಡಿ ಪ್ರತಿಭಟನೆಗೆ ಇಳಿಯಬೇಕು ಎಂದು ಹೇಳಿದ್ದಾರೆ.





