ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿ

ಮಂಗಳೂರು, ಸೆ.21: ಚಾಲಕನ ನಿಯಂತ್ರಣ ತಪ್ಪಿದ ಟೆಂಪೊವೊಂದು ಹೆದ್ದಾರಿ ಬದಿಯ ಲೈಟ್‌ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಗಳೂರಿನ ಎ.ಜೆ. ಆಸ್ಪತ್ರೆ ಸಮೀಪ ಸಂಭವಿಸಿದೆ.
ಬಿಸ್ಕಿಟ್ ಗಳನ್ನು ಹೇರಿಕೊಂಡು ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ನ ಮೇಲೇರಿದೆ. ಬಳಿಕ ವಿದ್ಯುದ್ದೀಪದ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ.
ಟೆಂಪೋದಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Next Story





