ಕಾವೇರಿ ವಿವಾದ: ಸಿಎಂ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಬೆಂಗಳೂರು, ಸೆ.21: ಕಾವೇರಿ ನೀರು ಹಂಚಿಕೆ ಕುರಿತಂತೆ ರಾಜ್ಯ ಸರಕಾರದ ತೀರ್ಮಾನಗಳ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದೆ.
ಸಭೆಯಲ್ಲಿ ರಾಜ್ಯದ ಎಲ್ಲಾ ಸಚಿವರು, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡರಾದ ಆಸ್ಕರ್ ಫೆರ್ನಾಂಡಿಸ್, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಟಿ. ಶರವಣ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
Next Story





