ಕಾವೇರಿ ವಿಚಾರದಲ್ಲಿ ನಾನು ಮಧ್ಯಪ್ರವೇಶಿಸಲಾರೆ : ಮೋದಿ

ಹೊಸದಿಲ್ಲಿ, ಸೆ.21: ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ನಾನು ಮಧ್ಯಪ್ರವೇಶಿಸಲಾರೆ. ನೀವು ಈ ಬಗ್ಗೆ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಅವರೊಂದಿಗೆ ಮಾತನಾಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎನ್ನಲಾಗಿದೆ.
ಕಾವೇರಿ ನದಿ ನೀರು ಹಂಚಿಕೆ ಬಿಕ್ಕಟ್ಟು ಶಮನಗೊಳಿಸಲು ತಾವು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ರಾಜ್ಯ ಬಿಜೆಪಿ ನಾಯಕರು ಮೋದಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.
ಮೋದಿ ಸಲಹೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಉಮಾಭಾರತಿ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
Next Story





