30 ಬಾಲ ಕಾರ್ಮಿಕರ ರಕ್ಷಣೆ
ಶಿವಮೊಗ್ಗದಲ್ಲಿ ಆಪರೇಷನ್ ಮುಸ್ಕಾನ್-2
ಶಿವಮೊಗ್ಗ, ಸೆ. 21: ಬಾಲ ಕಾರ್ಮಿ ಕರ ರಕ್ಷಣೆಗೆ ಜಿಲ್ಲಾ ಪೊಲೀಸ್ ಇಲಾ ಖೆಯು ಸಂಬಂಧಿಸಿದ ಇಲಾಖೆ ಗಳ ಸಹಯೋಗದೊಂದಿಗೆ ಶಿವಮೊಗ್ಗ ನಗರದಲ್ಲಿ ‘ಆಪರೇಷನ್ ಮುಸ್ಕಾನ್ - 2’ ಎಂಬ ವಿಶೇಷ ಕಾರ್ಯಾಚರಣೆಯನ್ನು ಯಾವುದೇ ಸದ್ದುಗದ್ದಲವಿಲ್ಲದೆ ಆರಂಭಿಸಿದೆ. ಈ ಮೂಲಕ ಒಂದೇ ದಿನದಲ್ಲಿ ನಗರದ ವಿವಿಧೆಡೆ ದಿ
ಢೀರ್ ದಾಳಿ ನಡೆಸಿ 30 ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಸಂರಕ್ಷಣೆ ಮಾಡಿದೆ. ಅಲ್ಲದೆ, ಬಾಲ ಕಾರ್ಮಿಕರನ್ನು ಕರ್ತವ್ಯಕ್ಕೆ ನಿಯೋಜಿಸಿ ಕೊಂಡಿದ್ದವರ ವಿರುದ್ಧ ಕಾನೂನು ರೀತಿಯ ಕ್ರಮ ಜರಗಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಬುಧವಾರ ಕೂಡ ನಗರಾದ್ಯಂತ ಪೊಲೀಸ್ ಇಲಾಖೆ ಕಾರ್ಯಾಚರಣೆ ಮುಂದುವರಿಸಿದ್ದು, ಇನ್ನಷ್ಟು ಬಾಲ ಕಾರ್ಮಿಕರ ಪತ್ತೆಗೆ ಮುಂದಾಗಿದೆ. ಮತ್ತೊಂದೆಡೆ ಕಾರ್ಯಾಚರಣೆಯ ವಿಷಯ ತಿಳಿಯುತ್ತಿದ್ದಂತೆ ತಮ್ಮ ಉದ್ದಿಮೆ ಸೇರಿದಂತೆ ಇತರ ಕರ್ತವ್ಯ ಸ್ಥಳಗಳಲ್ಲಿ ನಿಯೋಜಿಸಿಕೊಂಡಿದ್ದ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲ ಕಾರ್ಮಿಕರನ್ನು ಮಾಲಕರು ಕೆಲಸದಿಂದ ಬಿಡುಗಡೆಗೊಳಿಸುತ್ತಿರುವ ಮಾಹಿತಿ ಕೂಡ ತಿಳಿದುಬಂದಿದೆ. ಾರ್ಯಾಚರಣೆ: ಬಾಲ ಕಾರ್ಮಿಕರ ರಕ್ಷಣೆಗಾಗಿ ರಾಜ್ಯ ಸರಕಾರ ‘ಆಪರೇ ಷನ್ ಮುಸ್ಕಾನ್- 2’ ಎಂಬ ಕಾರ್ಯಾ ಚರಣೆ ಆರಂಭಿಸಿದ್ದು, ಇದರನ್ವಯ ಜಿಲ್ಲಾ ಪೊಲೀಸ್ ಇಲಾಖೆ ನಗರದ ವಿವಿಧೆಡೆ ಕೆಲಸ ಮಾಡುತ್ತಿರುವ 16 ವರ್ಷ ವಯೋಮಾನದೊ
ಳಗಿನ ಬಾಲಕಾರ್ಮಿಕರ ಪತ್ತೆಗೆ ಮುಂದಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ತಂಡವೊಂದನ್ನು ರಚಿಸಲಾಗಿದ್ದು, ಇದರಲ್ಲಿ ಪೊಲೀಸ್ ಅಧಿಕಾರಿ-ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಬಾಲ ನ್ಯಾಯ ಮಂಡಳಿ, ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಘಟಕದವರು ಕಾರ್ಯನಿರ್ವಹಿಸುತ್ತಿದ್ದಾರೆ.
ಈ ತಂಡವು ಸೆ. 20 ರಿಂದ ನಗರದ ವಿವಿಧೆಡೆ ದಿಢೀರ್ ದಾಳಿ ನಡೆಸಿ ಬಾಲ ಕಾರ್ಮಿಕರ ಪತ್ತೆ ಕಾರ್ಯ ನಡೆಸುತ್ತಿದೆ. ಬಾಲ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡರೆ ವಿಧಿಸಬಹುದಾದ ದಂಡ - ಶಿಕ್ಷೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಅಲ್ಲದೆ, ಬಾಲ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸ್ಥಳಗಳ ಮುಖ್ಯಸ್ಥರ ವಿರುದ್ಧ ಕ್ರಮವನ್ನೂ ಜರಗಿಸುತ್ತಿದೆ. ಎಫ್‌ಐಆರ್ ದಾಖಲು: 16 ವರ್ಷಕ್ಕಿಂತ ಕಡಿಮೆ ವಯೋಮಾನದವರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನು ರೀತಿಯ ಅಪರಾಧವಾಗಿದೆ. ನಿಯಮ ಉಲ್ಲಂಘಿಸಿ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ಧ ಕೇಸ್ ದಾಖಲಿಸಿ, ಕಾನೂನು ರೀತಿಯ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಬುಧವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.







