ಸೆ.28ರಂದು ‘ಕರ್ನಾಟಕದಲ್ಲಿ ಗ್ರಾಮ ಸ್ವರಾಜ್’ ಸಂವಾದ ಕಾರ್ಯಕ್ರಮ
ಮಂಗಳೂರು, ಸೆ.21: ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಆಶ್ರಯದಲ್ಲಿ ‘ಕರ್ನಾಟಕ ದಲ್ಲಿ ಗ್ರಾಮ ಸ್ವರಾಜ್’ ಎಂಬ ಸಂವಾದ ಕಾರ್ಯಕ್ರಮ ಸೆ.28 ರಂದು ಬೆಳಗ್ಗೆ 9:30ಕ್ಕೆ ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನ ದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹೀಂ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
ದ.ಕ. ಸೇರಿದಂತೆ ರಾಜ್ಯದ ಎಲ್ಲ ಜಿಪಂ ಸದಸ್ಯರು, ತಾಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಪ್ರತಿ ತಾಲೂಕಿನಿಂದ ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದ ವರ್ಗ ಮತ್ತು ಸಾಮಾನ್ಯ ಮಹಿಳೆ ಸೇರಿದಂತೆ ಐದು ಗ್ರಾಂಪಂ ಅಧ್ಯಕ್ಷರು, ಎಲ್ಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕದ ಮುಖ್ಯಸ್ಥರು ಮತ್ತು ಪದಾಧಿಕಾರಿಗಳು, ವಿಧಾನಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಮತ್ತು ರಾಜ್ಯದ ಪಂಚಾಯತ್ ರಾಜ್ ಪ್ರಮುಖರು ಇದರಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಅಶೋಕ್ ಡಿ.ಕೆ., ಪದ್ಮನಾಭ ನರಿಂಗಾನ, ಬಲರಾಜ ರೈ, ಕೆ.ಅಶ್ರ್, ಬಾಲಕೃಷ್ಣ ಶೆಟ್ಟಿ, ನಝೀರ್ ಬಜಾಲ್, ಸಿ.ಎಂ.ಮುಸ್ತಾ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.





