ಕಾವೇರಿ ಬಿಕ್ಕಟ್ಟು: ಎಸ್.ಎಂ.ಕೃಷ್ಣರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

ಬೆಂಗಳೂರು, ಸೆ.22: ಕಾವೇರಿ ಜಲವಿವಾದ ಇನ್ನಷ್ಟು ಕಂಗಟ್ಟಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಸಮಾಲೋಚನೆಗಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಭೇಟಿಯಾದರು.
ನಗರದ ಸದಾಶಿವ ನಗರದಲ್ಲಿರುವ ಎಸ್.ಎಂ.ಕೃಷ್ಣರ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ಕಾವೇರಿ ಜಲವಿವಾದಕ್ಕೆ ಸಂಬಂಧಿಸಿ ಮಾತುಕತೆ ನಡೆಸಿದರು.
ಈ ಸಂದರ್ಭ ಮುಖ್ಯಮಂತ್ರಿಯವರೊಂದಿಗೆ ಸಚಿವರಾದ ಟಿ.ಬಿ.ಜಯಚಂದ್ರ, ಮಹದೇವಪ್ರಸಾದ್, ಎಚ್.ಸಿ.ಮಹದೇವಪ್ಪ ಉಪಸ್ಥಿತರಿದ್ದರು.
Next Story





