ಸಂಸದ ಪ್ರತಾಪ್ ಸಿಂಹಗೆ ಮಂಡ್ಯದಲ್ಲಿ ತರಾಟೆ

ಮಂಡ್ಯ, ಸೆ.23: ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರು ಇಂದು ಮಂಡ್ಯಕ್ಕೆ ಆಗಮಿಸಿದಾಗ ಅವರನ್ನು ಕಾವೇರಿ ಹಿತರಕ್ಷಣಾ ಸಮಿತಿ ಸದಸ್ಯರು ತೀವ್ರ ತರಾಟೆಗೆ ತೆಗೆದುಕೊಂಡರು.
ಇಷ್ಟರ ತನಕ ಬಾರದಿದ್ದ ಪ್ರತಾಪ್ ಸಿಂಹ ಸಭೆಯಲ್ಲಿ ಭಾಗವಹಿಸಿ ತಾನು ಕೊಡಗಿನವ. ನಿಮ್ಮ ಜೊತೆ ನಾನಿದ್ದೇನೆ ಎಂದು ಭರವಸೆ ನೀಡಿದ್ದರು.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕ್ಕೆ ಆಗಮಿಸಿ ತರೆಳುತ್ತಿದ್ದ ಪ್ರತಾಪ್ ಸಿಂಹ ಅವರನ್ನು ತರಾಟೆಗೆ ತೆಗೆದುಕೊಂಡರು.
ಕೇಂದ್ರ ಸರಕಾರ ಮಧ್ಯಪ್ರವೇಶಿಸದೇ ಇರುವುದನ್ನು ಪ್ರತಿಭಟಿಸಿ ತನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕಾವೇರಿ ಕ್ರಿಯಾ ಸಮಿತಿ ಕಾರ್ಯಕರ್ತರು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ನಿವಾಸಕ್ಕೆ ಮಂಗಳವಾರ ಮುತ್ತಿಗೆ ಹಾಕಿದ್ದರು.
Next Story





