ಬಂಟ್ವಾಳ: ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾತ ವಶಕ್ಕೆ
ಬಂಟ್ವಾಳ, ಸೆ.23: ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಪೊಲೀಸರು ವಶಕ್ಕೆ ಪಡೆದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗದಗ ಜಿಲ್ಲೆಯ ಹುಡುಕು ಕಾಲನಿ ನಿವಾಸಿ ಅಬ್ದುರ್ರಝಾಕ್(30) ಬಂಧಿತ ಆರೋಪಿ.
ಈತ ಗುರುವಾರ ಮುಂಜಾನೆ 3:30 ರ ವೇಳೆಗೆ ಬಿ.ಸಿ.ರೋಡಿನ ಕೈಕುಂಜೆ ಪರಿಸರದಲ್ಲಿ ಅನುಮಾನಾಸ್ಪದವಾಗಿ ತಿರುಗಡುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಬಂಟ್ವಾಳ ನಗರ ಠಾಣೆಯ ಅಪರಾಧ ಪತ್ತೆ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಗರ ಠಾಣೆ ಎಸ್ಸೈ ನಂದ ಕುಮಾರ್, ಅಪರಾಧ ವಿಭಾಗದ ಎಸ್ಸೈ ಗಂಗಾಧರಪ್ಪ ನೇತೃತ್ವದ ಈ ಕಾರ್ಯಾಚರಣೆಯಲ್ಲಿ ಎಎಸ್ಸೈ ಸಂಜೀವ, ಸುರೇಶ್, ಗಂಗಾಧರ್ ಮೊದಲಾದವರು ಭಾಗವಹಿಸಿದ್ದರು.
Next Story





