Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಕಾರ್ಲೆಟ್ ಅತ್ಯಾಚಾರ-ಕೊಲೆ ಪ್ರಕರಣ:...

ಸ್ಕಾರ್ಲೆಟ್ ಅತ್ಯಾಚಾರ-ಕೊಲೆ ಪ್ರಕರಣ: ಗೋವಾ ನ್ಯಾಯಾಲಯದಿಂದ ಆರೋಪಿಗಳಿಬ್ಬರ ಖುಲಾಸೆ

ವಾರ್ತಾಭಾರತಿವಾರ್ತಾಭಾರತಿ23 Sept 2016 6:13 PM IST
share
ಸ್ಕಾರ್ಲೆಟ್ ಅತ್ಯಾಚಾರ-ಕೊಲೆ ಪ್ರಕರಣ: ಗೋವಾ ನ್ಯಾಯಾಲಯದಿಂದ ಆರೋಪಿಗಳಿಬ್ಬರ ಖುಲಾಸೆ

ಪಣಜಿ, ಸೆ.23: ಭಾರತದ ಪ್ರವಾಸೋದ್ಯಮದ ಕರಾಳ ಮುಖವನ್ನು ಜಾಗತಿಕವಾಗಿ ಪ್ರದರ್ಶಿಸಿ, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ, 2008ರ ಬ್ರಿಟಿಶ್ ಶಾಲಾ ಬಾಲಕಿ ಸ್ಕಾರ್ಲೆಟ್ ಕೀಲಿಂಗ್‌ಳ ಅತ್ಯಾಚಾರ ಹಾಗೂ ಕೊಲೆ ಆರೋಪಿಗಳಾಗಿದ್ದ ಇಬ್ಬರನ್ನು ಗೋವಾದ ನ್ಯಾಯಾಲಯವೊಂದು ಶುಕ್ರವಾರ ಖುಲಾಸೆಗೊಳಿಸಿದೆ.

ಅವರು ಎಲ್ಲ ಆರೋಪಗಳಲ್ಲೂ ನಿರ್ದೋಷಿಗಳೆಂದು ನ್ಯಾಯಾಧೀಶೆ ವಂದನಾ ತೆಂಡುಲ್ಕರ್ ತೀರ್ಪು ನಿಡಿದ್ದಾರೆ. ಸಾಮ್ಸನ್ ಡಿಸೋಜಾ ಹಾಗೂ ಪ್ಲಾಸಿಡೊ ಕಾರ್ವೆಲೊ ಎಂಬವರು ಖುಲಾಸೆಗೊಂಡವರಾಗಿದ್ದಾರೆ.

ಈ ತೀರ್ಪಿನಿಂದ ತಾನು ಸರ್ವನಾಶಗೊಂಡಂತಾಗಿದ್ದೇನೆ. ಅದರ ವಿರುದ್ಧ ಖಂಡಿತವಾಗಿ ಮೇಲ್ಮನವಿ ಸಲ್ಲಿಸುವೆನೆಂದು ಸ್ಕಾರ್ಲೆಟ್‌ಳ ತಾಯಿ ಫಿಯೋನಾ ಮೆಕ್ಕೀನ್ ಎಂಬವರು ಹೇಳಿದ್ದಾರೆ.

ತಾವು ಇಷ್ಟು ಸಮಯ ಕಾದೆವು. ಆದರೆ, ಪ್ರಯೋಜನವಾಗಲಿಲ್ಲ. ಭಾರತದ ಇಡೀ ನ್ಯಾಯಾಂಗ ವ್ಯವಸ್ಥೆ ತನ್ನನ್ನು ಸಂಪೂರ್ಣವಾಗಿ ನೆಲಕ್ಕೆ ಕೆಡವಿದೆಯೆಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತನ್ನ ಮಗಳನ್ನು ಈ ದೇಶದಲ್ಲೇ ಕೆಲವರು ಕೊಂದಿದ್ದಾರೆ. ಅದಕ್ಕೆ ಅವರನ್ನು ಹೊಣೆ ಮಾಡಲೇಬೇಕೆಂದು ಫಿಯೋನಾ ಆಗ್ರಹಿಸಿದ್ದಾರೆ.

8 ವರ್ಷಗಳ ಹಿಂದೆ, 15ರ ಹರೆಯದ ಸ್ಕಾರ್ಲೆಟ್‌ಳ ಗಾಯಗೊಂಡಿದ್ದ ಹಾಗೂ ಅರೆ ಬೆತ್ತಲೆಯಾಗಿದ್ದ ಮೃತದೇಹ ಜನಪ್ರಿಯ ಅಂಜುನಾ ಬೀಚ್‌ನಲ್ಲಿ ಪತ್ತೆಯಾಗಿತ್ತು. ಪೊಲೀಸರು ಅದನ್ನು ಮೊದಲು ಅಪಘಾತವೆಂದು ಹೇಳಿದ್ದರೂ, ಫಿಯೋನಾ ಎರಡನೆ ಬಾರಿ ಶವ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ ಬಳಿಕ, ಬಾಲಕಿಗೆ ಮತ್ತು ಬರುವ ಔಷಧಿ ನೀಡಿ, ಅತ್ಯಾಚಾರ ನಡೆಸಿದ್ದುದು ಸಾಬೀತಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X