Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೃತ್ತಿಯ ಕೀಳರಿಮೆ ಬಿಟ್ಟು ಮಕ್ಕಳನ್ನು...

ವೃತ್ತಿಯ ಕೀಳರಿಮೆ ಬಿಟ್ಟು ಮಕ್ಕಳನ್ನು ಶಿಕ್ಷಣವಂತರನ್ನಾಗಿ ರೂಪಿಸಿ: ಕವಿತಾ ಶೇಖರ

ಪೌರಕಾರ್ಮಿಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ23 Sept 2016 10:05 PM IST
share
ವೃತ್ತಿಯ ಕೀಳರಿಮೆ  ಬಿಟ್ಟು ಮಕ್ಕಳನ್ನು ಶಿಕ್ಷಣವಂತರನ್ನಾಗಿ  ರೂಪಿಸಿ: ಕವಿತಾ ಶೇಖರ

ಚಿಕ್ಕಮಗಳೂರು, ಸೆ.23: ವೃತ್ತಿಯಲ್ಲಿ ಯಾವುದೂ ಮೇಲು ಕೀಳಲ್ಲ. ನಾವು ಮಾಡುವ ವೃತ್ತಿಯಲ್ಲಿ ಕೀಳರಿಮೆ ಬಿಟ್ಟು ಮಕ್ಕಳನ್ನು ಶಿಕ್ಷಣವಂತರನ್ನಾಗಿ ರೂಪಿಸಿದರೆ ಉತ್ತಮ ಜೀವನಕ್ಕೆ ಸಹಕಾರಿಯಾಗುತ್ತದೆ ಎಂದು ನಗರಸಭೆ ಅಧ್ಯಕ್ಷೆ ಕವಿತಾ ಶೇಖರ್ ಹೇಳಿದರು.

ಅವರು ಶುಕ್ರವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಪೌರ ಸೇವಾ ನೌಕರರ ಸಂಘ ಹಾಗೂ ನಗರಸಭೆೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ನಸುಕಿನ ಜಾವದಲ್ಲಿ ಎದ್ದು ಸ್ವಚ್ಛತೆ ಮಾಡುವ ಮೂಲಕ ನಗರದ ಜನರ ಹಿತ ಕಾಪಾಡುವ ಪೌರ ಕಾರ್ಮಿಕರು ಶ್ರಮ ಜೀವಿಗಳು. ನಿಮ್ಮ ಆರೋಗ್ಯ ಕಾಪಾಡುವುದು ನಮ್ಮ ಕರ್ತವ್ಯ. ಈ ಸಂಬಂಧ ಸರಕಾರದಿಂದ ದೊರೆಯಬಹುದಾದ ಎಲ್ಲ ಸವಲತ್ತುಗಳನ್ನು ಸಮರ್ಪಕವಾಗಿ ಪೂರೈಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

 ನಿತ್ಯ ಕೆಲಸದ ವೇಳೆ ಅಗತ್ಯವಿರುವ ಶೂ, ಹ್ಯಾಂಡ್‌ಗ್ಲೌಸ್, ಜರ್ಕಿನ್ ಸೇರಿದಂತೆ ಅಗತ್ಯ ಸವಲತ್ತುಗಳನ್ನು ಕಾಲಕಾಲಕ್ಕೆ ನೀಡಲು ಕ್ರಮಕೈಗೊಳ್ಳುತ್ತೇನೆ ಎಂದು ನುಡಿದರು.

ಸ್ವಚ್ಛ ಭಾರತ ಅಭಿಯಾನದಲ್ಲಿ ದೇಶದ 72 ನಗರಗಳ ಪೈಕಿ ರಾಜ್ಯದ ಮೈಸೂರು ನಗರ ಪ್ರಥಮ ಸ್ಥಾನ ಪಡೆದಿದೆ. ಮುಂದೆ ಅದು ನಿಮ್ಮೆಲ್ಲರ ಸಹಕಾರದಿಂದ ಚಿಕ್ಕಮಗಳೂರು ನಗರ ಪ್ರಥಮ ಸ್ಥಾನಕ್ಕೇರಬೇಕು ಎಂದು ನುಡಿದರು.

ಪೌರ ಸೇವಾ ನೌಕರರ ಸಂಘದ ರಾಜ್ಯಾಧ್ಯಕ್ಷ ಪಿ.ಗುರುಮೂರ್ತಿ ಮಾತನಾಡಿ, ಪ್ರತಿಯೊಂದು ಸ್ವಚ್ಛತಾ ಕೆಲಸಕ್ಕೆ ಪೌರ ಕಾರ್ಮಿಕರನ್ನು ಉಪಯೋಗಿಸಿಕೊಳ್ಳುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇಂತಹ ಸಂದಭರ್ದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಸಲಹೆ ಸಹಕಾರ ನೀಡುವ ಬದಲು ಗೈರಾಗಿರುವುದು ಬೇಸರದ ಸಂಗತಿ ಎಂದು ವಿಷಾದಿಸಿದರು.

   ಪ್ರಶಸ್ತಿ ಪುರಸ್ಕೃತ ಪೌರಸೇವಾ ನೌಕರರಾದ ಬಿ.ವೆಂಕಟೇಶ್, ಜಿ. ಓಬಳಮ್ಮ, ಸುಶೀಲಮ್ಮ, ವೈ. ಗುರುವ, ತಿರುಪ, ಓಬಳಣ್ಣ ಅವರಿಗೆ 5 ಸಾವಿರ ನಗದಿನೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭಕ್ಕೂ ಮುನ್ನ ನಗರದ ಮಿನಿ ವಿಧಾನಸೌಧದಿಂದ ನೂರಾರು ಪೌರ ಕಾರ್ಮಿಕರು ಮೆರವಣಿಗೆಯಲ್ಲಿ ಮುಖ್ಯರಸ್ತೆ ಮೂಲಕ ಅಂಬೇಡ್ಕರ್ ಭವನಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಡೊಳ್ಳುಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

 ಪೌರಸೇವಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಅಣ್ಣಯ್ಯ, ನಗರಸಭೆ ಉಪಾಧ್ಯಕ್ಷ ರವೀಂದ್ರ ಪ್ರಭು, ಸದಸ್ಯರಾದ ಶ್ಯಾಮಲಾರಾವ್, ಮುತ್ತಯ್ಯ, ವನಿತಾ, ನರಸಿಂಹ, ರೂಬಿನ ಮೋಸಸ್, ಸಂದೇಶ್, ಕೃಷ್ಣ, ಸುಧೀರ್, ಪುಷ್ಪಾ ರಾಜ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಕುಮಾರ್, ಪ್ರಭಾರ ಪೌರಾಯುಕ್ತ ಆನಂದ್, ರಮೇಶ್ ನಾಯ್ಡು, ಸುನೀಲ್, ಎನ್.ಅಣ್ಣಯ್ಯ, ಶ್ರೀನಿವಾಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X