Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ದಸರಾಕ್ಕೆ ಸರಕಾರ ಕೊಟ್ಟರೂ...

ಮಂಗಳೂರು ದಸರಾಕ್ಕೆ ಸರಕಾರ ಕೊಟ್ಟರೂ ನೆರವು ಪಡೆಯುವುದಿಲ್ಲ!

ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದ ನವೀಕರಣದ ರುವಾರಿ ಜನಾರ್ದನ ಪೂಜಾರಿಯ ಸ್ಪಷ್ಟ ನುಡಿ

ವಾರ್ತಾಭಾರತಿವಾರ್ತಾಭಾರತಿ24 Sept 2016 3:55 PM IST
share
ಮಂಗಳೂರು ದಸರಾಕ್ಕೆ ಸರಕಾರ ಕೊಟ್ಟರೂ ನೆರವು ಪಡೆಯುವುದಿಲ್ಲ!

ಮಂಗಳೂರು, ಸೆ.24: ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಪ್ರತಿ ವರ್ಷದಂತೆ ನಡೆಯಲಿರುವ ಮಂಗಳೂರು ದಸರಾಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.
ಕ್ಷೇತ್ರದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಂಗಳೂರು ದಸರಾ ಬಗ್ಗೆ ಕ್ಷೇತ್ರದ ನವೀಕರಣದ ರುವಾರಿ ಜನಾರ್ದನ ಪೂಜಾರಿ ಮಾಹಿತಿ ನೀಡಿದರು.
ಮಂಗಳೂರು ದಸರಾದ ಅಂಗವಾಗಿ ಅಕ್ಟೋಬರ್ 1ರಂದು ಬೆಳಗ್ಗೆ 11.15 ಗಂಟೆಗೆ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ಮಾತೆಯ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. ಅಕ್ಟೋಬರ್ 9ರಂದು 10 ಗಂಟೆಗೆ ಚಂಡಿಕಾ ಹೋಮ, ಹಗಲೋತ್ಸವ ನಡೆಯಲಿದೆ. ಕ್ಷೇತ್ರಕ್ಕೆ ಬರುವ ಶಾಲಾ ಮಕ್ಕಳು ಮತ್ತು ಭಕ್ತರಿಗೆ ನಿತ್ಯ ಅನ್ನ ಸಂತರ್ಪಣೆ ನಡೆಯಲಿದೆ. ಅ. 10ರಂದು ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ಮಹಾ ಅನ್ನ ಸಂತರ್ಪಣೆ, ನಡೆದು, ಅ. 11ರಂದು ಕ್ಷೇತ್ರದ ಆವರಣದಿಂದ ಸಂಜೆ 4 ಗಂಟೆಗೆ ‘ಮಂಗಳೂರು ದಸರಾ ಮೆರವಣಿಗೆ’ ಹೊರಡಲಿದೆ ಎಂದು ಅವರು ಹೇಳಿದರು.
ಸರಕಾರದ ನೆರವು ಪಡೆಯುವುದಿಲ್ಲ!
ಮಂಗಳೂರು ದಸರ ಕಾರ್ಯಕ್ರಮಕ್ಕೆ ಈವರೆಗೆ ಸರಕಾರದಿಂದ ಒಂದು ನಯಾ ಪೈಸೆಯನ್ನೂ ಪಡೆಯಲಾಗಿಲ್ಲ. ನನ್ನನ್ನೂ ಸೇರಿಸಿ ಸಂಸದ ನಿಧಿಯಾಗಿ, ಶಾಸಕರ ನಿಧಿಯಾಗಲಿ ಕ್ಷೇತ್ರಕ್ಕಾಗಿ ಬಳಕೆ ಮಾಡಲಾಗಿಲ್ಲ. ಸರಕಾರ ಕೊಡುವುದಾಗಿ ಹೇಳಿದರೂ ಪಡೆಯುವುದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಜನಾರ್ದನ ಪೂಜಾರಿ ಪ್ರತಿಕ್ರಿಯಿಸಿದರು.
ಮಂಗಳೂರು ದಸರಾಕ್ಕೆ ಜನಶಕ್ತಿಯೇ ಬೆಂಬಲ
ಮಂಗಳೂರು ದಸರಾವನ್ನು ಕಳೆದ 25 ವರ್ಷಗಳಿಂದ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಇದಕ್ಕೆ ಜನಶಕ್ತಿಯ ಬೆಂಬಲವೇ ಕಾರಣ ಎಂದು ಜನಾರ್ದನ ಪೂಜಾರಿ ಹೇಳಿದರು.
ಶೋಭಾ ಯಾತ್ರೆಯಲ್ಲಿ ಶಾರದಾ ಮಾತೆ, ಮಹಾಗಣಪತಿ, ನವದುರ್ಗೆಯರ ಸಹಿತ ರಾಜ್ಯದ ವಿವಿಧ ಕಡೆಗಳಿಂದ 75ಕ್ಕೂ ಅಧಿಕ ಸ್ತಬ್ಧ ಚಿತ್ರಗಳು ಭಾಗವಹಿಸಲಿವೆ. ಯಾತ್ರೆಯು ಕಂಬಳ ರಸ್ತೆಯಾಗಿ ಲೇಡಿಹಿಲ್, ಲಾಲ್‌ಬಾಗ್, ಬಲ್ಲಾಳ್‌ಬಾಗ್, ಕೊಡಿಯಾಲ್‌ಬೈಲ್, ಹಂಪನಕಟ್ಟೆ, ವಿವಿ ಕಾಲೇಜು, ಗಣಪತಿ ಹೈಸ್ಕೂಲ್, ಕಾರ್‌ಸ್ಟ್ರೀಟ್, ಚಿತ್ರಾ ಟಾಕಿಸ್ ಅಳಕೆ ಮಾರ್ಗವಾಗಿ ಅ. 12ರಂದು ಬೆಳಗ್ಗಿನ ಜಾವ ಕ್ಷೇತ್ರಕ್ಕೆ ಹಿಂತಿರುಗಲಿದೆ. ಮಂಗಳೂರು ದಸರಾ ಸಂದರ್ಭ ಕ್ಷೇತ್ರದ ಸಂತೋಷಿ ಕಲಾ ಮಂಟಪದಲ್ಲಿ ವಿವಿಧ ರಾಜ್ಯ, ರಾಷ್ಟ್ರ ಮಟ್ಟದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ ಎಂದು ಕ್ಷೇತ್ರದ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದರು.
 

ಗೋಕರ್ಣ ಕ್ಷೇತ್ರ ಸ್ವಾಧೀನದ ಕ್ರಮ ಕೀಳು ಮಟ್ಟದ ರಾಜಕೀಯ!

ರಾಮಚಂದ್ರಾಪುರ ಮಠದ ಸ್ವಾಧೀನಕ್ಕೊಳಪಟ್ಟ ಗೋಕರ್ಣಕ್ಷೇತ್ರವನ್ನು ಸ್ವಾಧೀನಕ್ಕೆ ಪಡೆಯುವ ಸರಕಾರದ ಕ್ರಮ ಕೀಳು ಮಟ್ಟದ ರಾಜಕೀಯ ಎಂದು ಜನಾರ್ದನ ಪೂಜಾರಿ ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X