Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರೀ ಮಳೆಯಿಂದಾಗಿ ಸಂಕಷ್ಟದಲ್ಲಿರುವ...

ಭಾರೀ ಮಳೆಯಿಂದಾಗಿ ಸಂಕಷ್ಟದಲ್ಲಿರುವ ಹೈದರಾಬಾದ್‌ನಲ್ಲಿ ಸೇನೆ ನಿಯೋಜನೆ

ವಾರ್ತಾಭಾರತಿವಾರ್ತಾಭಾರತಿ24 Sept 2016 7:45 PM IST
share
ಭಾರೀ ಮಳೆಯಿಂದಾಗಿ ಸಂಕಷ್ಟದಲ್ಲಿರುವ ಹೈದರಾಬಾದ್‌ನಲ್ಲಿ ಸೇನೆ ನಿಯೋಜನೆ

ಹೈದರಾಬಾದ್,ಸೆ.24: ತೆಲಂಗಾಣದ ರಾಜಧಾನಿ ಮತ್ತು ಇತರ ಭಾಗಗಳಲ್ಲಿ ಮಳೆರಾಯನ ಅಬ್ಬರದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಸೇನೆಯ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗಿದೆ. ಭಾರೀ ಮಳೆಯಿಂದಾಗಿ ಜಲಾವೃತಗೊಂಡಿರುವ ಹಲವಾರು ತಗ್ಗು ಪ್ರದೇಶಗಳು ಇನ್ನೂ ಸಂಪರ್ಕವನ್ನು ಕಳೆದುಕೊಂಡಿವೆ.

ಹೈದರಾಬಾದ್‌ನ ಬೇಗಂಪೇಟ್,ನಿಝಾಮ್‌ಪೇಟ್ ಮತ್ತು ಹಕೀಮ್‌ಪೇಟ್ ಪ್ರದೇಶ ಗಳಿಗೆ ಮತ್ತು ರಂಗಾರೆಡ್ಡಿ ಜಿಲ್ಲೆಯ ಅಲ್ವಾಲ್‌ಗೆ ಯೋಧರನ್ನು ರವಾನಿಸಲಾಗಿದೆ ಎಂದು ರಕ್ಷಣಾ ಇಲಾಖೆಯು ತಿಳಿಸಿದೆ.

ಸೇನೆಯು ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆಯಲ್ಲಿ ನಿಯಂತ್ರಣ ಕೊಠಡಿಯೊಂದನ್ನು ಸ್ಥಾಪಿಸಿದ್ದು, ಪಾಲಿಕೆ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ(ಎನ್‌ಡಿಆರ್ ಎಫ್)ಯ ಅಧಿಕಾರಿಗಳ ಸಮನ್ವಯದೊಂದಿಗೆ ದಿನದ 24 ಗಂಟೆಗಳ ಕಾಲವೂ ಪರಿಸ್ಥಿತಿಯ ಮೇಲೆ ನಿಗಾಯಿರಿಸಿದೆ ಎಂದು ಅದು ಹೇಳಿದೆ.

ಯೋಧರು ಈಗಾಗಲೇ ಅಲ್ವಾಲ್‌ನ ಕೊಳಗೇರಿ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಗತ್ಯವಾದರೆ ನಿಯೋಜಿಸಲು ಇನ್ನಷ್ಟು ಯೋಧರನ್ನು ಸನ್ನದ್ಧವಾಗಿರಿಸಲಾಗಿದೆ ಎಂದಿದೆ. ಹೈದರಾಬಾದನ ಕೆಲವು ತಗ್ಗು ಪ್ರದೇಶಗಳು ಈಗಲೂ ಸಂಪರ್ಕವನ್ನು ಕಡಿದು ಕೊಂಡಿದ್ದು ಸಂತ್ರಸ್ತರಿಗೆ ಹಾಲು ಇತ್ಯಾದಿ ಆಹಾರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹೈದರಾಬಾದ್ ಹಾಗೂ ರಂಗಾರೆಡ್ಡಿ, ಖಮ್ಮಮ್,ವಾರಂಗಲ್ ಮತ್ತು ಮೇಡಕ್ ಜಿಲ್ಲೆಗಳಲ್ಲಿ ಶನಿವಾರ ಶಾಲಾಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿತ್ತು.

ಶುಕ್ರವಾರ ಮೇಡಕ್ ಜಿಲ್ಲೆಯಲ್ಲಿ ಮಳೆಸಂಬಂಧಿ ಘಟನೆಗಳಲ್ಲಿ ನಾಲ್ವರು ಮೃತಪಟ್ಟಿದ್ದು, ಇತರ ಆರು ಜನರು ಗಾಯಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X