ಮೀನುಗಾರಿಕಾ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ
ಕೇಂದ್ರ ಸಚಿವರಿಗೆ ಸಚಿವ ಪ್ರಮೋದ್ ಮಧ್ವರಾಜ್ ಮನವಿ
ಬೆಂಗಳೂರು, ಸೆ.24: ಒಳನಾಡು ಹಾಗೂ ಸಮುದ್ರ ಮೀನುಗಾರಿಕೆ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಿ ರಾಧಾಮೋಹನ್ ಸಿಂಗ್‌ರನ್ನು ಭೇಟಿ ನೀಡಿ ಮನವಿ ಮಾಡಿದ್ದಾರೆ.
ಹೊಸದಿಲ್ಲಿಯಲ್ಲಿ ಕೇಂದ್ರ ಕೃಷಿ ಸಚಿವ ರಾಧಾಮೋಹನ್ ಸಿಂಗ್‌ರನ್ನು ಭೇಟಿ ಮಾಡಿದ ಅವರು, ಮೀನುಗಾರಿಕೆ ಸಮುದಾಯದ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ಮತ್ತು ಸೂಕ್ತ ಅನುದಾನ ಬಿಡುಗಡೆ ಮಾಡಬೇಕು. ಕರಾವಳಿ ರಾಜ್ಯಗಳ ಮೀನುಗಾರಿಕೆ ಸಚಿವರುಗಳ ಸಮ್ಮೇಳನವನ್ನು ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಬೇಕು ಎಂದು ಅವರು ಕೋರಿದರು.
Next Story





