Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ್ಞಾನ-ತಂತ್ರಜ್ಞಾನ ಒಂದೆಡೆ ಸೇರಿದರೆ...

ಜ್ಞಾನ-ತಂತ್ರಜ್ಞಾನ ಒಂದೆಡೆ ಸೇರಿದರೆ ಪರಿಪೂರ್ಣತೆ ಸಾಧ್ಯ: ಪ್ರೊ.ಬಿ.ಎ.ವಿವೇಕ್ ರೈ

ಮಂಗಳೂರು ವಿವಿಯಲ್ಲಿ ‘ಗಿಳಿವಿಂಡು ಕಲರವ’

ವಾರ್ತಾಭಾರತಿವಾರ್ತಾಭಾರತಿ25 Sept 2016 5:26 PM IST
share
ಜ್ಞಾನ-ತಂತ್ರಜ್ಞಾನ ಒಂದೆಡೆ ಸೇರಿದರೆ ಪರಿಪೂರ್ಣತೆ ಸಾಧ್ಯ: ಪ್ರೊ.ಬಿ.ಎ.ವಿವೇಕ್ ರೈ

ಕೊಣಾಜೆ, ಸೆ.25: ನಮಗೆ ದೊರೆತ ಮಾಹಿತಿಯನ್ನು ಪ್ರಶ್ನಿಸಿ ಪರಾಮರ್ಶೆಗೊಳಪಡಿಸಿದರೆ ನಮ್ಮ ಜ್ಞಾನದ ವಿಸ್ತಾರದ ಜೊತೆಗೆ ನೈಜತೆಯನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಇಂದಿನ ಕಾಲಘಟ್ಟದಲ್ಲಿ ಅಧ್ಯಯನಕ್ಕೆ ಪೂರಕವಾಗಿ ಹಲವಾರು ತಂತ್ರಜ್ಞಾನಗಳು ಹುಟ್ಟಿಕೊಂಡಿದ್ದು, ಜ್ಞಾನ ಮತ್ತು ತಂತ್ರಜ್ಞಾನ ಒಂದೆಡೆ ಸೇರಿದರೆ ಪರಿಪೂರ್ಣತೆಯನ್ನು ಬೆಳೆಸಿಕೊಳ್ಳಲು ಸಾದ್ಯವಾಗುತ್ತದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ್ ರೈ ಅವರು ಅಭಿಪ್ರಾಯಪಟ್ಟರು.

ಅವರು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ರವಿವಾರ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ಹಳೆವಿದ್ಯಾರ್ಥಿಗಳ ಒಕ್ಕೂಟ ಗಿಳಿವಿಂಡು ವತಿಯಿಂದ ನಡೆದ ‘ಗಿಳಿವಿಂಡು ಕಲರವ’-2ನೆ ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ನಮ್ಮಲ್ಲಿ ವೈಚಾರಿಕತೆ ಎನ್ನುವುದು ಬದುಕಿನಿಂದ ಮತ್ತು ಗ್ರಂಥದಿಂದ ಬರುವಂತಹದ್ದು. ಅಧ್ಯಾಪನ ವೃತ್ತಿ ಅದೊಂದು ಶಕ್ತಿ ಇದ್ದ ಹಾಗೆ. ನನ್ನ ಜೀವನದಲ್ಲಿ ಅಧ್ಯಾಪನ ವೃತ್ತಿಯಲ್ಲಿ ತೊಡಗಿಕೊಂಡನಂತರ ಹಲವಾರು ರೀತಿಯ ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಜ್ಞಾನವನ್ನು ವಿಸ್ತರಿಸಿಕೊಳ್ಳಲು ಸಾಧ್ಯವಾಯಿತು. ಈ ಅಧ್ಯಾಪನ ವೃತ್ತಿಗೆ ಬರದೇ ಇದ್ದರೆ ಬೌದ್ಧಿಕವಾಗಿ ನಾನು ಬೆಳೆಯಲು ಖಂಡಿತಾ ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದ ಅವರು ಮಂಗಳೂರು ವಿ.ವಿ.ಯಲ್ಲಿ ಕಳೆದ ಅವಿಸ್ಮರಣೀಯ ಕ್ಷಣಗಳನ್ನು ನೆನಪಿಸಿಕೊಂಡರು. ಅಲ್ಲದೆ ಗಿಳಿವಿಂಡು ಸಮಾವೇಶದಂತಹ ಕಾರ್ಯಕ್ರಮದಿಂದ ಹಳೆವಿದ್ಯಾರ್ಥಿಗಳ ಜೊತೆಗಿನ ಸಮಾಗಮದೊಂದಿಗೆ ಹೊಸತನವನ್ನು ಕಂಡುಕೊಳ್ಳಲು ಸಾಧ್ಯವಿದೆ ಎಂದರು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿ.ವಿ. ಕುಲಪತಿ ಪ್ರೊ.ಕೆ.ಬೈರಪ್ಪ, ಕನ್ನಡ ಅಧ್ಯಯನ ಸಂಸ್ಥೆಗೆ ಪರಮೇಶ್ವರ ಭಟ್ಟ ಅವರ ಕೊಡುಗೆ ಅಪಾರವಾದದ್ದು. ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಇದೀಗ ಗಿಳಿವಿಂಡು ಸಂಘವನ್ನು ಕಟ್ಟಕೊಂಡು ಹಲವಾರು ಕಾರ್ಯಕ್ರಮಗಳೊಂದಿಗೆ ಜ್ಞಾನದ ಕೊಂಡಿಯನ್ನು ವಿಸ್ತರಿಸುತ್ತಿದ್ದಾರೆ. ಇಂತಹ ಒಕ್ಕೂಟ ಪ್ರತಿಯೊಂದು ವಿಭಾಗದಲ್ಲೂ ಸ್ಥಾಪನೆಯಾಗಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಚಿನ್ನಪ್ಪ ಗೌಡ ಅವರು, ಹಿಂದೆ ವಿದ್ಯಾರ್ಥಿಗಳ ರ್ಯಾಂಕ್‌ಗಳ ಆಧಾರದಲ್ಲಿ ಶಿಕ್ಷಣ ಸಂಸ್ಥೆಗಳ ವೌಲ್ಯವನ್ನು ಅಳೆಯಲಾಗುತ್ತಿತ್ತು. ಆದರೆ ಈಗಿನ ಕಾಲಘಟ್ಟ ಹಾಗಿಲ್ಲ. ಇದೀಗ ವಿದ್ಯಾರ್ಥಿಗಳ ಜೊತೆಗೆ ಅಧ್ಯಾಪಕರನ್ನು ವೌಲ್ಯಮಾಪನ ಮಾಡಲಾಗುತ್ತಿದೆ. ಆದ್ದರಿಂದ ನಮ್ಮಲ್ಲಿರುವ ವೌಲ್ಯಗಳು ಪ್ರಧಾನ ಪಾತ್ರ ವಹಿಸುತ್ತದೆ ಅಲ್ಲದೆ ಅನುಭವ, ಕನಸು ಮತ್ತು ನೆನಪು ನಮ್ಮ ಜೀವನದಲ್ಲಿ ಪ್ರಮುಖವಾದ ಅಂಶವಾಗಿವೆ. ಹಳೆ ವಿದ್ಯಾರ್ಥಿಗಳ ಸಮಾಗಮದೊಂದಿಗೆ ಜ್ಞಾನವನ್ನು ಅರಿತುಕೊಳ್ಳುವ ಕೆಲಸದೊಂದಿಗೆ ಹೃದಯ ಕೇಂದ್ರಿತ ಭಾವನೆಗಳನ್ನು ಹಂಚಿಕೊಳ್ಳುವುದಕ್ಕೆ ಗಿಳಿವಿಂಡು ಕಾರ್ಯಕ್ರಮ ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರೊ.ಬಿ.ಎ.ವಿವೇಕ್ ರೈ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಎಸ್‌ವಿಪಿ ಕನ್ನಡ ಅಧ್ಯಯನ ವಿಭಾಗದ 2016-17ನೆ ಭಿತ್ತಿ ಪತ್ರಿಕೆಯ ಆವೃತ್ತಿಯನ್ನು ಬಿಡುಗಡೆಗೊಳಿಸಲಾಯಿತು.

ಸಮಾರಂಭದಲ್ಲಿ ಮಂಗಳೂರು ವಿ.ವಿ. ಕುಲಸಚಿವ ಪ್ರೊ.ಲೋಕೇಶ್ ಉಪಸ್ಥಿತರಿದ್ದರು. ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಶಿವರಾಮ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಧ್ಯಾಪಕ ಡಾ.ನಾಗಪ್ಪಗೌಡ ವಂದಿಸಿದರು. ಕನ್ನಡ ಅಧ್ಯಯನ ವಿಭಾಗದ ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X