Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.27ರಂದು ಜನಮನ ಕಾರ್ಯಕ್ರಮ: ಉಸ್ತುವಾರಿ...

ಸೆ.27ರಂದು ಜನಮನ ಕಾರ್ಯಕ್ರಮ: ಉಸ್ತುವಾರಿ ಸಚಿವರಿಂದ ಫಲಾನುಭವಿಗಳೊಂದಿಗೆ ಸಂವಾದ

ವಾರ್ತಾಭಾರತಿವಾರ್ತಾಭಾರತಿ25 Sept 2016 7:10 PM IST
share
ಸೆ.27ರಂದು ಜನಮನ ಕಾರ್ಯಕ್ರಮ: ಉಸ್ತುವಾರಿ ಸಚಿವರಿಂದ ಫಲಾನುಭವಿಗಳೊಂದಿಗೆ ಸಂವಾದ

ಮಂಗಳೂರು, ಸೆ.25: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಹಯೋಗದೊಂದಿಗೆ ಸೆಪ್ಟಂಬರ್ 27 ರಂದು ನಗರದ ಪುರಭವನದಲ್ಲಿ ಜನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ರಾಜ್ಯ ಸರಕಾರವು 3 ವರ್ಷ ಅವಧಿಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಆ ಯೋಜನೆಗಳಿಂದ ಫಲ ಪಡೆಯುತ್ತಿರುವ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು ನೇರವಾಗಿ ಸಂವಾದ ನಡೆಸಲಿದ್ದಾರೆ.

ಅನ್ನಭಾಗ್ಯ, ಕ್ಷೀರಭಾಗ್ಯ, ಹೈನುಗಾರರಿಗೆ ಪ್ರತೀ ಲೀಟರ್ ಹಾಲಿಗೆ 4 ರೂ. ಸಬ್ಸಿಡಿ, ವಿದ್ಯಾಸಿರಿ, ಮತ್ಸ್ಯಾಶ್ರಯ, ಮನಸ್ವಿನಿ, ಮೈತ್ರಿ, ಬಿದಾಯಿ, ಮುಖ್ಯಮಂತ್ರಿ ಹರೀಶ್ ಸಾಂತ್ವನ ಯೋಜನೆ, 94ಸಿ ಹಕ್ಕುಪತ್ರ ಯೋಜನೆ ಸೇರಿದಂತೆ ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ಕಳೆದ ಮೂರು ವರ್ಷಗಳಲ್ಲಿ ಜಾರಿಗೆ ತರಲಾಗಿದೆ. ಸರಕಾರ ಅನುಷ್ಠಾನಗೊಳಿಸಿದ ಈ ಯೋಜನೆಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುತ್ತಿವೆಯೇ, ಇವುಗಳನ್ನು ಇನ್ನಷ್ಟು ಜನರಿಗೆ ಹೇಗೆ ತಲುಪಿಸಬಹುದು, ಯೋಜನೆಯನ್ನು ಪರಿಣಾಮಕಾರಿಯಾಗಿ ಹೇಗೆ ಮಾಡಬಹುದು ಎಂಬುದರ ಬಗ್ಗೆ ಫಲಾನುಭವಿಗಳಿಂದಲೇ ನೇರವಾಗಿ ಕೇಳಿ ತಿಳಿದುಕೊಳ್ಳಲು ಈ ಜನಮನ ಕಾರ್ಯಕ್ರಮವನ್ನು ಸರಕಾರ ಏರ್ಪಡಿಸಲಾಗುತ್ತಿದೆ.
 
ಈ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳು ಆಗಮಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವೇದಿಕೆಯಲ್ಲಿಯೇ ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲಿದ್ದಾರೆ. ಜನಮನ ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಸೆಪ್ಟಂಬರ್ 27ರಂದು ಬೆಳಗ್ಗೆ 10:30ಕ್ಕೆ ಪುರಭವನದಲ್ಲಿ ಜನಮನ ಕಾರ್ಯಕ್ರಮವನ್ನು ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದು, ಶಾಸಕ ಜೆ.ಆರ್.ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ವಿವಿಧ ನಿಗಮ, ಅಕಾಡಮಿ, ಮಂಡಳಿಗಳ ಅಧ್ಯಕ್ಷರು, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ವಾರ್ತಾಧಿಕಾರಿಗಳ ಪ್ರಕಟನೆ ತಿಳಿಸಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X