Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮೀಣ ಕ್ರೀಡೆಗೆ ಉತ್ತೇಜನ ಅಗತ್ಯ:...

ಗ್ರಾಮೀಣ ಕ್ರೀಡೆಗೆ ಉತ್ತೇಜನ ಅಗತ್ಯ: ಜಿಲ್ಲಾಧಿಕಾರಿ ನಕುಲ್

ಕೆಸರುಗದ್ದೆ ಕ್ರೀಡಾಕೂಟ, ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ25 Sept 2016 10:15 PM IST
share
ಗ್ರಾಮೀಣ ಕ್ರೀಡೆಗೆ ಉತ್ತೇಜನ ಅಗತ್ಯ: ಜಿಲ್ಲಾಧಿಕಾರಿ ನಕುಲ್

 ಕಾರವಾರ, ಸೆ.25: ಗ್ರಾಮೀಣ ಕ್ರೀಡೆಗಳು ಜನರನ್ನು ಸಂಘಟಿಸಿ ಸೌಹಾರ್ದ ಬೆಳೆಸಲು ಅನುಕೂಲವಾಗಿದ್ದು, ಇಂತಹ ಕ್ರೀಡೆಗಳಿಗೆ ಉತ್ತೇಜನ ನೀಡುವ ಆವಶ್ಯಕತೆಯಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು.

ತಾಲೂಕಿನ ಖಾರ್ಗಾದ ಮಾಂಡೆಬೋಳ ಗ್ರಾಮದಲ್ಲಿ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಖಾರ್ಗಾ ಗ್ರಾಮಸ್ಥರ ಸಹಯೋಗದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಕೆಸರುಗದ್ದೆ ಕ್ರೀಡಾಕೂಟ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ದೇಶದ ಕ್ರೀಡಾಪಟುಗಳು ಇನ್ನಷ್ಟು ಸಾಧನೆ ಮಾಡಲು ಆರಂಭದಿಂದಲೇ ಪ್ರೋತ್ಸಾಹ ಸಿಗಬೇಕಿದೆ. ಗ್ರಾಮೀಣ ಕ್ರೀಡೆಗಳು ಈ ನಿಟ್ಟಿನಲ್ಲಿ ಆಟಗಾರರ ಮನೋಸ್ಥೈರ್ಯ ಹೆಚ್ಚಿಸುವುದರ ಜೊತೆಗೆ ಕ್ರೀಡಾ ಮನೋಭಾವನೆ ವೃದ್ಧಿಸುತ್ತವೆ. ಕ್ರೀಡಾಪಟುಗಳ ಜೊತೆಗೆ, ದೇಶ ಸೇವೆಗೈದ ಮಾಜಿ ಸೈನಿಕರನ್ನು ಗೌರವಿಸುತ್ತಿರುವ ಕಾರ್ಯಕ್ರಮ ಶ್ಲಾಘನೆಗೆ ಅರ್ಹವಾಗಿದೆ ಎಂದರು.

ಮಾಜಿ ಸೈನಿಕರಿಗೆ ಸನ್ಮಾನ:

ಸೈನಿಕರ ಗ್ರಾಮವೆಂದೆ ಖ್ಯಾತಿಗಳಿಸಿದ ಖಾರ್ಗಾದ ಮಾಂಡೇಬೋಳದ ಸುಮಾರು 17ಜನ ಸೈನಿಕರನ್ನು ಸನ್ಮಾನಿಸಲಾಯಿತು. ದೇಶದ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದ ಶಾಂತಾ ಕೆ.ಸಾವಂತ, ರಮಾಕಾಂತ ಎಂ.ಸಾವಂತ, ಸಾಯಿನಾಥ ಸಾವಂತ, ಸುರೇಂದ್ರ ಸಾವಂತ, ಉತ್ತಮ ಕೆ.ಸಾವಂತ, ಉಲ್ಲಾಸ ಬಿ. ಸಾವಂತ, ಮಲ್ಲೂ ಜಿ.ಸಾವಂತ, ವಿನಯ ಕೆ.ಸಾವಂತ, ಸೈರೋಬಾ ವಿ.ಸಾವಂತ, ಮಧುಕರ ದೇವದಾಸ, ಪಾಂಡುರಂಗ ಸಾವಂತ, ಸದಾನಂದ ಸಾವಂತ, ಪ್ರೇಮಾನಂದ ನಾಯ್ಕ, ಮುರಳಿ ನಾಯ್ಕ, ಶಾಂತಾರಾಮ ಶೇಟ್, ರತ್ನಾಕರ ನಾಯ್ಕ, ಭಾಸ್ಕರ ನಾಯ್ಕರನ್ನು ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.

ಜೈ ಜವಾನ್ ಜೈ ಕಿಸಾನ್:

 ದೇಶದ ಗಡಿಕಾಯ್ದ ಸೈನಿಕರಂತೆ ದೇಶಕ್ಕೆ ಅನ್ನ ನೀಡಿ ಹಸಿವು ನೀಗಿಸುವ ರೈತರನ್ನು ಸನ್ಮಾನಿಸುವ ಮೂಲಕ ಮತ್ತೊ ಂದು ಅಪರೂಪದ ಕ್ಷಣಕ್ಕೆ ಕಾರ್ಯ ಕ್ರಮ ಸಾಕ್ಷಿಯಾಯಿತು. ಪ್ರಗತಿಪರ ರೈತರಾದ ದತ್ತಾ ಆರ್.ಸಾವಂತ, ಸುರೇಶ ಎನ್.ಸಾವಂತ ಹಾಗೂ ಉಲ್ಲಾಸ ವಿ.ಬಾಂದೇಕರ್‌ರನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಪಂ ಸದಸ್ಯೆ ಚೈತ್ರಾ ಸಿ.ಕೊಠಾರಕರ್, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ನಗರಸಭೆ ಸದಸ್ಯ ದೇವಿದಾಸ ನಾಯ್ಕ, ವೈಲವಾಡಾ ಗ್ರಾಪಂ ಅಧ್ಯಕ್ಷೆ ಸೌಭಾಗ್ಯಾ ವಿ.ನಾಯ್ಕ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಪ್ರಕಾಶ ಗುನಗಿ, ದೇವಳಮಕ್ಕಿ ಗ್ರಾಪಂ ಅಧ್ಯಕ್ಷ ದೇವಿದಾಸ ಬೆಳೂರಕರ, ಶಿಕ್ಷಣ ಇಲಾಖೆ ಅಧಿಕಾರಿ ರಾಮಕೃಷ್ಣನಾಯಕ, ವೈಲವಾಡಾ ಗ್ರಾಪಂ ಸದಸ್ಯೆ ದೀಪಾ ಹುಲಸ್ವಾರ, ಮಾಜಿ ಸೈನಿಕ ಶಾಂತಾ ಸಾವಂತ, ವಿದ್ಯಾ ಪಾವಸ್ಕರ್, ರವಿಕಾಂತ ಸಾವಂತ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಬಿ.ಹರಿಕಾಂತ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಸಂದೀಪ್ ಸಾಗರ್ ನಿರೂಪಿಸಿದರು. ಸಂಘದ ಖಜಾಂಚಿ ಸುಭಾಷ್ ಧೂಪದಹೊಂಡ ಸನ್ಮಾನಿತರ ಪರಿಚಯ ಮಾಡಿ, ಕಾರ್ಯಕ್ರಮ ನಿರ್ವಹಿಸಿದರು. ಅಚ್ಚುತಕುಮಾರ್ ವಂದನಾರ್ಪಣೆ ಮಾಡಿದರು.

ವಿವಿಧ ಕೃಷಿ ಸಲಕರಣೆಗಳು ಹಾಗೂ ಗ್ರಾಮೀಣ ಭಾಗದ ಮನೆಗಳಲ್ಲಿ ಬಳಸುವ ವಿವಿಧ ನಮೂನೆಯ ಸಾಂಪ್ರದಾಯಿಕ ಪರಿಕರಗಳ ವಸ್ತು ಪ್ರದರ್ಶನ, ಗದ್ದೆ ಉಳುಮೆ ಮಾಡಲು ಬಳಸುವ ನೇಗಿಲು, ಗೊರಬು, ಮಜ್ಜಿಗೆ ಕಡೆಯುವ ಕುಡುಗೋಲು, ಬುಟ್ಟಿಗಳು ಸೇರಿದಂತೆ ವಿವಿಧ ವಸ್ತುಗಳು ನೆರೆದ ಜನರಿಗೆ ಪ್ರಧಾನ ಆಕರ್ಷಣೆೆಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X