Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಗ್ಗಟ್ಟಿನ ಮೂಲಕ ಸವಾಲನ್ನು ಎದುರಿಸಿ:...

ಒಗ್ಗಟ್ಟಿನ ಮೂಲಕ ಸವಾಲನ್ನು ಎದುರಿಸಿ: ಶಾಸಕ ಬೋಪಯ್ಯ

ಓಣಂ ಹಬ್ಬ ಆಚರಣೆ

ವಾರ್ತಾಭಾರತಿವಾರ್ತಾಭಾರತಿ25 Sept 2016 10:33 PM IST
share
ಒಗ್ಗಟ್ಟಿನ ಮೂಲಕ ಸವಾಲನ್ನು ಎದುರಿಸಿ: ಶಾಸಕ ಬೋಪಯ್ಯ

ಮಡಿಕೇರಿ,ಸೆ.25: ಸಮಾಜವನ್ನು ಸಂಘಟಿಸಿ ಒಗ್ಗಟ್ಟನ್ನು ಮೂಡಿಸಿದಾಗ ಮಾತ್ರ ಭವ್ಯ ಭಾರತದ ಯಾವುದೇ ಸವಾಲುಗಳನ್ನು ಎದುರಿಸಿ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯವೆಂದು ವೀರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ.

ಹಿಂದೂ ಮಲಯಾಳಿ ಸಂಘದಿಂದ ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ನಡೆದ ಓಣಂ ಹಬ್ಬಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ನಾವೆಲ್ಲರೂ ಒಗ್ಗಟ್ಟನ್ನು ಕಾಯ್ದುಕೊಳ್ಳುವ ಮೂಲಕ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಈ ದೇಶದಲ್ಲಿ ಪ್ರತಿಯೊಂದು ಸಮಾಜವು ತನ್ನ ವಿಶಿಷ್ಟ ಸಂಸ್ಕೃತಿ, ಆಚಾರ ವಿಚಾರಗಳನ್ನು ಕೈಬಿಡದೆ ಅದನ್ನು ಯುವ ಸಮೂಹಕ್ಕೆ ತಲುಪಿಸುವ ಮಹತ್ತರ ಕಾರ್ಯವನ್ನು ಮಾಡಬೇಕೆಂದು ಕರೆ ನೀಡಿದರು.

ಕೊಡಗು ಮತ್ತು ಕೇರಳ ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದೆ. ಇಲ್ಲಿನ ಯಾವುದೇ ದೈವಗಳ ಮೂಲ ನೆಲೆ ನೆರೆಯ ಕೇರಳವಾಗಿದ್ದು, ಈ ರೀತಿ ಪರಸ್ಪರ ಸಂಬಂಧಗಳನ್ನು ಹೊಂದಿರುವ ಕೊಡಗು ಮತ್ತು ಕೇರಳದ ಸಂಸ್ಕೃತಿಯನ್ನು ಸಂರಕ್ಷಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ನೆರೆಯ ಕೇರಳದಿಂದ ಕೊಡಗಿಗೆ ಬಂದು ನೆಲೆಸಿ ದುಡಿಮೆಯ ಮೂಲಕ ಸ್ವಾಭಿಮಾನದ ಬದುಕನ್ನು ಕಟ್ಟಿಕೊಂಡಿರುವ ಮಲಯಾಳಿ ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪೋಷಕ ವರ್ಗ ತಮ್ಮ ಮಕ್ಕಳಿಗೆ ಅಗತ್ಯ ಶಿಕ್ಷಣವನ್ನು ಒದಗಿಸುವುದರೊಂದಿಗೆ ಲಭ್ಯ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿಯನ್ನು ಕಾಣಬೇಕೆಂದು ಅವರು ಕಿವಿ ಮಾತು ಹೇಳಿದರು.

ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಮಾತನಾಡಿ, ಸಾಂಸ್ಕೃತಿಕ ಸಂಬಂಧಗಳನ್ನು ಹೊಂದಿರುವ ಕೊಡಗು ಮತ್ತು ಕೇರಳದ ಮಂದಿ ಅಣ್ಣ ತಮ್ಮಂದಿರಂತೆ ಬಾಳಬೇಕಾಗಿದೆ. ಹಿಂದೂ ಮಲಯಾಳಿ ಸಂಘದ ಮೂಲಕ ತಮ್ಮ ಸಮೂಹದ ಮಕ್ಕಳಿಗೆ ಐಎಎಸ್, ಐಪಿಎಸ್‌ನಂತಹ ಉನ್ನತ ವ್ಯಾಸಂಗಕ್ಕೆ ಅಗತ್ಯ ಸಹಕಾರವನ್ನು ಒದಗಿಸುವಂತೆ ಸಲಹೆ ನೀಡಿದರು.

 ನಗರಸಭಾ ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್ ಮಾತನಾಡಿ, ಕೇರಳಿಗರು ವಿಶ್ವದ ವಿವಿಧೆಡೆಗಳಲ್ಲಿ ನೆಲೆಸಿದ್ದು, ಓಣಂ ಹಬ್ಬದ ಮೂಲಕ ಸೌಹಾರ್ದ ಪಸರಿಸುವ ಪ್ರಯತ್ನವನ್ನು ಮಾಡುತ್ತಿರುವುದಾಗಿ ಸಂತಸ ವ್ಯಕ್ತಪಡಿಸಿದರು.

ಸಮಾರಂಭವನ್ನು ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಪಿ.ಎಸ್.ಸುರೇಶ್‌ಉದ್ಘಾಟಿಸಿದರು, ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್. ರಮೇಶ್ ಮಾತನಾಡಿದರು.

ಆಕರ್ಷಕ ಮೆರವಣಿಗೆ

ಭಾ ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಚೌಡೇಶ್ವರಿ ದೇಗುಲ ದಿಂದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದವರೆಗೆ ಮಾವೇಲಿ ವೇಷ ಧಾರಿಗಳು, ಚಂಡೆ ವಾದ್ಯ, ಸ್ನೇಕ್ ಬೋಟ್ ಸ್ತಬ್ಧ ಚಿತ್ರವನ್ನು ಒಳ ಗೊಂಡಂತೆ ನೂರಾರು ಮಲಯಾಳಿ ಬಾಂಧವರು ಸಾಂಪ್ರದಾಯಿಕ ಉಡುಪಿನಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X