ಕಾವೇರಿ ಕೊಳ್ಳದ ಹೇಮಾವತಿ ನಾಲಾ ಪ್ರದೇಶದಲ್ಲಿ ಬಹುತೇಕ ಕೆರೆಗಳು ಸಂಪೂರ್ಣ ಬತ್ತಿ ಹೋಗಿದ್ದು, ರೈತರಲ್ಲಿ ಮುಂದೇನು ಎಂಬ ಆತಂಕ ಮನೆ ಮಾಡಿದೆ. ತುಮಕೂರು ಜಿಲ್ಲೆಯ ಹೇಮಾವತಿ ನಾಲಾ ವಲಯದ 176 ಕೆರೆಗಳ ಪೈಕಿ ಕೇವಲ 21 ಕೆರೆಗಳಲ್ಲಿ ಮಾತ್ರ ಅಲ್ಪಸ್ವಲ್ಪ ನೀರಿದ್ದು, ಜನ, ಜಾನುವಾರುಗಳು, ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರಿನ ತತ್ವಾರ ಸೃಷ್ಟಿಯಾಗಿದೆ.