ಮರಕ್ಕೆ ಢಿಕ್ಕಿ ಹೊಡೆದ ಬೈಕ್: ಸವಾರ ಮೃತ್ಯು

ಪುತ್ತೂರು, ಸೆ.26: ಬೈಕೊಂದು ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.
ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕನ್ನಡಮೂಲೆ ನಿವಾಸಿ ಕೃಷಿಕ ಇಬ್ರಾಹೀಂ (48) ಮೃತಪಟ್ಟ ವ್ಯಕ್ತಿ.
ಅವರು ತನ್ನ ಬೈಕ್‌ನಲ್ಲಿ ತನ್ನ ಮನೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾಣಿ ಮೈಸೂರು ರಸ್ತೆಯ ಆರ್ಯಾಪು ಗ್ರಾಮದ ಸಂಪ್ಯ ಎಂಬಲ್ಲಿ ರಸ್ತೆ ಬದಿಯಲ್ಲಿರುವ ಮರಕ್ಕೆ ಬೈಕ್ ಢಿಕ್ಕಿ ಹೊಡೆದಿತ್ತು. ಈ ವೇಳೆ ರಸ್ತೆಗೆಸೆಯಲ್ಪಟ್ಟು ಅವರಿಗೆ ಗಂಭೀರ ಗಾಯವಾಗಿತ್ತು. ಗಾಯಾಳುವನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ಪತ್ನಿಯನ್ನು ಅಗಲಿದ್ದಾರೆ.
Next Story





