ಪತ್ನಿಯ ಕತ್ತುಸೀಳಿ ಹತ್ಯೆಗೈದು, ಆತ್ಮಹತ್ಯೆಗೆ ಯತ್ನಿಸಿದ ಪತಿ

ದಾವಣಗೆರೆ, ಸೆ.26: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಮಾರಾಕಾಸ್ತ್ರದಿಂದ ತನ್ನ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿ ಬಳಿಕ ತಾನು ಕೂಡಾ ಕತ್ತು ಕೊಯ್ದು ಕೊಂಡು ಆತ್ಮಹತ್ಯೆ ಯತ್ನಿಸಿರುವ ಘಟನೆ ತಾಲೂಕಿನ ಲೋಕಿಕರೆ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಇಲ್ಲಿನ ನಿವಾಸಿ ಗೀತಾ(24) ಕೊಲೆಯಾದ ಮಹಿಳೆ. ಈಕೆಯ ಪತಿ ಮಂಜುನಾಥ (36) ಈಕೆಯನ್ನು ಕೊಲೆಗೈದಿದ್ದು, ಬಳಿಕ ತಾನು ಕೂಡಾ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಮಂಜುನಾಥ ನಗರದ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನಾ ಸ್ಥಳಕ್ಕೆ ಹದಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ದಂಪತಿಗಳಿಗೆ ಮೂವರು ಮಕ್ಕಳು ಇದ್ದಾರೆ. ಕೊಲೆಗೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
Next Story





