ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದವರು ಪೊಲೀಸರ ಬಲೆಗೆ
ಬಂಟ್ವಾಳ, ಸೆ.26: ಇಲ್ಲಿನ ಬಡ್ಡಕಟ್ಟೆಯಲ್ಲಿ ಅಂಗಡಿಗಳಿಗೆ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಸೋಮವಾರ ಸಂಜೆ ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ನಿವಾಸಿಗಳಾದ ಸಲೀಂ(36), ರಿಝ್ವಾನ್(22) ಮನ್ಸೂರ್ (23), ನಿತಿನ್(23) ಬಂಧಿತ ಆರೋಪಿಗಳಾಗಿದ್ದಾರೆ.
ಖಚಿತ ವರ್ತಮಾನದ ಮೇರೆಗೆ ಬಂಟ್ವಾಳ ನಗರ ಠಾಣೆಯ ಎಸ್ಸೈ ನಂದಕುಮಾರ್ ಮತ್ತವರ ತಂಡ ಈ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳಿಂದ ಸುಮಾರು 150 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಹತ್ತು ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ.
Next Story