Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಯೆಡೆಗೆ ' 56 ಇಂಚಿನ'...

ಪ್ರಧಾನಿ ಮೋದಿಯೆಡೆಗೆ ' 56 ಇಂಚಿನ' ಕ್ಷಿಪಣಿ ಬಿಟ್ಟ ಶಿವಸೇನೆ !

ವಾರ್ತಾಭಾರತಿವಾರ್ತಾಭಾರತಿ26 Sept 2016 11:44 PM IST
share
ಪ್ರಧಾನಿ ಮೋದಿಯೆಡೆಗೆ  56 ಇಂಚಿನ ಕ್ಷಿಪಣಿ ಬಿಟ್ಟ ಶಿವಸೇನೆ !

ಮುಂಬೈ,ಸೆ.27: ಉರಿ ಭಯೋತ್ಪಾದಕ ದಾಳಿಗಳ ಬಳಿಕ ಭಾರತದ ಹೆಜ್ಜೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಪರೋಕ್ಷವಾಗಿ ಟೀಕಿಸಿರುವ ಬಿಜೆಪಿ ಪ್ರಮುಖ ಮಿತ್ರಪಕ್ಷ ಶಿವಸೇನೆಯು, ನೆರೆರಾಷ್ಟ್ರದ ಪ್ರಧಾನಿ ನವಾಝ್ ಶರೀಫ್ ಅವರು ಈಗ ‘56 ಇಂಚಿನ ಎದೆ’ಯನ್ನು ತೋರಿಸುತ್ತಿದ್ದಾರೆ ಎಂದು ಹೇಳಿದೆ.ಭಾರತಕ್ಕೆ ತನ್ನ ಪ್ರಯತ್ನಗಳು ಜಾಗತಿಕ ನಾಯಕರಿಂದ ಬಾಯಿಮಾತಿನ ಉಪಚಾರವನ್ನು ಬಿಟ್ಟರೆ ಅಂತಹ ಹೇಳಿಕೊಳ್ಳುವಂತಹ ಫಲವನ್ನೇನೂ ನೀಡಿಲ್ಲ, ಹೀಗಾಗಿ ವಾಸ್ತವದಲ್ಲಿ ಭಾರತವನ್ನೇ ಪ್ರತ್ಯೇಕಿಸಲಾಗಿದೆಯೇ ಎಂಬ ಭಯವು ಕಾಡುತ್ತಿದೆ ಎಂದು ಅದು ಹೇಳಿದೆ.ಉರಿ ದಾಳಿಗಳ ಕುರಿತಂತೆ ನಿಜಕ್ಕೂ ಯಾವುದೇ ರಾಷ್ಟ್ರವು ಭಾರತವನ್ನು ಬೆಂಬಲಿಸಿಲ್ಲ,ಹೀಗಾಗಿ ಜಾಗತಿಕ ಸಂಬಂಧಗಳನ್ನು ಬೆಸೆಯುವ ಭಾರತದ ಎಲ್ಲ ಪ್ರಯತ್ನಗಳು ವಿಫಲಗೊಂಡಿವೆ. ಜಾಗತಿಕ ನಾಯಕರು ಕೇವಲ ಬಾಯುಪಚಾರದ ಮಾತುಗಳನ್ನಾಡಿದ್ದಾರೆ. ಆದರೆ ಬಿಜಿಪಿಯ ಸಾಮಾಜಿಕ ಮಾಧ್ಯಮ ಕೋಶವು ಅದರಲ್ಲೇ ಇಲ್ಲದ ಅರ್ಥವನ್ನು ಕಂಡುಕೊಂಡು ಈ ವಿಷಯದಲ್ಲಿ ಪಾಕಿಸ್ತಾನವನ್ನು ಪ್ರತ್ಯೇಕಗೊಳಿಸಲಾಗಿದೆ ಎಂದು ಬೀಗುತ್ತಿದೆ ಎಂದು ಶಿವಸೇನೆಯ ಮುಖವಾಣಿ ‘ಸಾಮನಾ ’ದ ಸೋಮವಾರದ ಸಂಚಿಕೆಯ ಸಂಪಾದಕೀಯ ಲೇಖನವು ಟೀಕಿಸಿದೆ.2014ರ ಸಾರ್ವತ್ರಿಕ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಉತ್ತರ ಪ್ರದೇಶದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಂದರ್ಭ ಮೋದಿಯವರು, 56 ಇಂಚಿನ ಎದೆಯು ದೇಶವು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬಲ್ಲುದು ಎಂದು ಹೇಳಿದ್ದು ಭಾರೀ ಸುದ್ದಿಯಾಗಿತ್ತು.ರಷ್ಯ ಪಾಕಿಸ್ತಾನದೊಂದಿಗಿನ ಜಂಟಿ ಮಿಲಿಟರಿ ಕವಾಯತನ್ನು ನಿಲ್ಲಿಸಿಲ್ಲ, ಅತ್ತ ಚೀನಾವೂ ಭಯೋತ್ಪಾದಕರ ದಾಳಿಯನ್ನು ಖಂಡಿಸಿಲ್ಲ. ಇಂಡೋನೇಷ್ಯಾ ಪಾಕಿಸ್ತಾನಕ್ಕೆ ರಕ್ಷಣಾ ಉಪಕರಣಗಳನ್ನು ನೀಡಲು ಮುಂದಾಗಿದೆ. ಮುಸ್ಲಿಮ್ ಸಂಘಟನೆಗಳು ಪಾಕಿಸ್ತಾನವನ್ನು ಬಹಿರಂಗವಾಗಿಯೇ ಬೆಂಬಲಿಸುತ್ತಿವೆ. ನೇಪಾಳವು ಕೂಡ ಅದರೊಡನೆ ಸೌಹಾರ್ದ ಸಂಬಂಧವನ್ನು ಉಳಿಸಿಕೊಳ್ಳಲು ಬಯಸುತ್ತಿದೆ ಎಂದು ಸೇನೆಯು ಬೆಟ್ಟು ಮಾಡಿದೆ.ಪಾಕಿಸ್ತಾನವು ಈಗಾಗಲೇ ಭಾರತದ ವಿರುದ್ಧ ಯುದ್ಧವನ್ನು ಘೋಷಿಸಿದೆ. ಪಠಾಣಕೋಟ್‌ನಿಂದ ಉರಿಯವರೆಗೆೆ ಅದು ನಮ್ಮ ಯೋಧರ ರಕ್ತವನ್ನು ಹರಿಸುತ್ತಲೇ ಬಂದಿದೆ,ಆದರೆ ನಾವು ಪಾಕಿಸ್ತಾನಕ್ಕೆ ಬೆದರಿಕೆಗಳನ್ನು ಒಡ್ಡುವುದಕ್ಕಷ್ಟೇ ಸಮಾಧಾನ ಪಟ್ಟುಕೊಳ್ಳುತ್ತಿದ್ದೇವೆ. ಕೇವಲ ಮಾತುಗಳಿಂದ ಈಗೇನೂ ಆಗದು. ಏಟಿಗೆ ಎದಿರೇಟು ನೀಡಲು ಈಗ ಸಕಾಲವಾಗಿದೆ ಎಂದು ಶಿವಸೇನೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X