ರಾಜ್ಯ ಮಟ್ಟದ ಚೆಸ್ ಸ್ಪರ್ಧೆ: ಸ್ವಾತಿ ಉತ್ತಮ ಸಾಧನೆ
ಮಂಗಳೂರು, ಸೆ.26: ಪಪೂ ಶಿಕ್ಷಣ ಇಲಾಖೆ ವತಿಯಿಂದ ರಾಯಚೂರಿನಲ್ಲಿ ಸೆ.24,25ರಂದು ಜರಗಿದ ಪಪೂ ವಿಭಾಗದ 19ವರ್ಷ ವಯೋಮಾನದ ಬಾಲಕಿಯರ ವಿಭಾಗದ ರಾಜ್ಯಮಟ್ಟದ ಚೆಸ್ ಸ್ಪರ್ಧೆಯಲ್ಲಿ ದ.ಕ. ಜಿಲ್ಲೆಯ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ.
ತಂಡವನ್ನು ಪ್ರತಿನಿಧಿಸಿದ್ದ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪಪೂ ಕಾಲೇಜಿನ ಸ್ವಾತಿ ಕೆ. ಭಟ್ 5ನೆ ಸ್ಥಾನವನ್ನು ಪಡೆದು ರಾಷ್ಟ್ರೀಯ ಮಟ್ಟಕ್ಕೆ ಅಯ್ಕೆಯಾಗಿದ್ದಾಳೆ ಎಂದು ಕಾಲೇಜಿನ ಅಧ್ಯಕ್ಷ ಯುವರಾಜ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





