200ಕ್ಕೂಹೆಚ್ಚುನರ ಬಂಧನ
ಕಾವೇರಿ ವಿವಾದ ಹಿನ್ನೆಲೆ
ಬೆಂಗಳೂರು, ಸೆ.27: ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವಂತೆ ಪುನಃ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿ ಮುನ್ನೆಚ್ಚರಿಕೆಯ ಕ್ರಮವಾಗಿ 200ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಮಂಗಳವಾರ ಬೆಳಗ್ಗೆಯಿಂದಲೇ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ನಿಷೇಧಾಜ್ಞೆ ಜಾರಿಯಲ್ಲಿದೆ. ಕಳೆದ ಬಾರಿ ನಡೆದ ಘಟನೆಯಲ್ಲಿ 1,035 ಜನರನ್ನು ಬಂಧಿಸಲಾಗಿತ್ತು. ಅದರಲ್ಲಿ 200 ಜನಕ್ಕೆ ಜಾಮೀನು ಸಿಕ್ಕಿದೆ. ಅಹಿತಕರ ಘಟನೆಗೆ ಕೈ ಹಾಕಬಾರದು ಹಾಗೂ ಸಾರ್ವಜನಿಕರು ಶಾಂತಿ ಕಾಪಾಡಬೇಕೆಂದು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story





