ಚನ್ನಮ್ಮಹಳ್ಳಿಕೇರಿಗೆ ‘ಗಾಂಧಿ ಸೇವಾ ಪ್ರಶಸ್ತಿ’

ಬೆಂಗಳೂರು, ಸೆ. 27: ಪ್ರಸಕ್ತ ಸಾಲಿನ ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿಯನ್ನು ಚನ್ನಮ್ಮ ಹಳ್ಳಿಕೇರಿ ಅವರಿಗೆ ಘೋಷಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅ.2ರ ಸಂಜೆ 6ಗಂಟೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕಲಾವಿದ ಎಂ.ಎಸ್.ಮೂರ್ತಿ ಚಿತ್ರಿಸಿರುವ ಗಾಂಧಿ ‘ರೇಖಾ ಚಿತ್ರ ದರ್ಶನ’ ಹಾಗೂ ಪತ್ರಕರ್ತೆ ರೇಖಾರಾಣಿ ನಿರ್ದೇಶಿಸಿರುವ ಚನ್ನಮ್ಮ ಹಳ್ಳಿಕೇರಿ ಅವರ ಸಾಕ್ಷ್ಯಚಿತ್ರವನ್ನು ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ಹೊ.ಶ್ರೀನಿವಾಸಯ್ಯ ಲೋಕಾರ್ಪಣೆ ಮಾಡಲಿದ್ದಾರೆ.
ಸಮಾರಂಭದ ಮುಖ್ಯ ಅತಿಥಿಗಳಾಗಿ ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್, ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಕೆ.ಜೆ.ಜಾರ್ಜ್, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹಾಗೂ ಗಾಂಧಿ ಸೇವಾ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ನ್ಯಾ.ಎ.ಜೆ. ಸದಾಶಿವ ಭಾಗವಹಿಸಲಿದ್ದಾರೆಂದು ಪ್ರಕಟನೆ ತಿಳಿಸಿದೆ.
Next Story





