ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ, ಸೆ.27: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಮಂಗಳವಾರ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಜರಗಿತು.
ಸಂಘದ ಜಿಲ್ಲಾಧ್ಯಕ್ಷ ಜಯಕರ ಸುವರ್ಣ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಪ್ರ.ಕಾರ್ಯದರ್ಶಿ ಗಣೇಶ್ ಪ್ರಸಾದ್ ಪಾಂಡೇಲು ವರದಿ ವಾಚಿಸಿದರು. ಕೋಶಾಧಿಕಾರಿ ರಾಜೇಶ್ ಶೆಟ್ಟಿ ಅಲೆವೂರು ಲೆಕ್ಕಪತ್ರ ಮಂಡಿಸಿದರು.
ಉಪಾಧ್ಯಕ್ಷ ಹರೀಶ್ ಹೆಜ್ಮಾಡಿ, ಜತೆ ಕಾರ್ಯದರ್ಶಿ ರಾಕೇಶ್ ಕುಂಜೂರು, ಕ್ರೀಡಾ ಕಾರ್ಯದರ್ಶಿ ನಝೀರ್ ಪೊಲ್ಯ, ಸಮಿತಿ ಸದಸ್ಯರಾದ ಬಾಲಕೃಷ್ಣ ಪೂಜಾರಿ, ಬಂಡಿಮಠ ಶಿವರಾಮ ಆರ್ಚಾಯ, ಅರುಣ್ ಕುಮಾರ್ ಶಿರೂರು ಉಪಸ್ಥಿತರಿದ್ದರು.
ಸುರೇಶ್ ಎರ್ಮಾಳ್ ವಂದಿಸಿದರು. ದೀಪಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು.
Next Story





