ಪ್ರವಾಸಿ ಕೇಂದ್ರಗಳಿಗೆ ಅಗತ್ಯ ಸೌಲಭ್ಯ: ಸಚಿವ ರೈ
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟನೆ

ಮಂಗಳೂರು, ಸೆ.27: ಪ್ರವಾಸಿ ಕೇಂದ್ರಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರಕಾರ ಬದ್ಧವಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಪ್ರವಾಸೋದ್ಯಮ ಇಲಾಖೆ ಮತ್ತು ದ.ಕ. ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜರಗಿದ ವಿಶ್ವ ಪ್ರವಾ ಸೋ ದ್ಯಮ ದಿನಾಚರಣೆ ಯನ್ನು ಉದ್ಘಾ ಟಿಸಿ ಅವರು ಮಾತನಾಡುತ್ತಿದ್ದರು.
ಪ್ರವಾಸೋದ್ಯಮ ಅಭಿವೃದ್ಧಿಗೆ ದ.ಕ. ಜಿಲ್ಲೆಯಲ್ಲಿ ವಿಪುಲ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮಕ್ಕೆ ಸಂಬಂ ಧಿಸಿ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದರು. ಜಾಗತಿಕ ಪ್ರವಾಸೋದ್ಯಮ ಸೌಲಭ್ಯಗಳ ಲಭ್ಯತೆಗೆ ಉತ್ತೇಜನ ವಿಷಯದ ಕುರಿತು ಉಪನ್ಯಾಸ ನೀಡಿದ ಮಂಗಳೂರು ವಿವಿ ಕಾಲೇಜಿನ ಪ್ರವಾಸೋದ್ಯಮ ಪ್ರಾಧ್ಯಾಪಕ ಪ್ರೊ.ಶ್ರೀರಾಜ್ ಬಿ.ಎಸ್., ಪ್ರವಾಸೋದ್ಯಮ ದೇಶದ ಆರ್ಥಿಕ ಶಕ್ತಿಯಾಗಿದೆ. ಶಾಂತಿ ಸೌಹಾರ್ದದ ಜೊತೆ ಬಾಂಧವ್ಯ ವೃದ್ಧಿಗೂ ಪ್ರವಾಸೋದ್ಯಮ ಪೂರಕವಾ ಗಿದೆ ಎಂದರು. ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಮಾತನಾಡಿ ‘ದ.ಕ. ಜಿಲ್ಲೆಯ ಪ್ರವಾ ಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿ ಮುಂದಿನ 15 ದಿನಗಳೊಳಗೆ ಸಮಾ ಲೋಚನಾ ಸಭೆ ನಡೆಸಿ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಪಣಂಬೂರು ಬೀಚ್ ಟೂರಿಸಂನ ಸಿಇಒ ಯತೀಶ್ ಬೈಕಂಪಾಡಿ, ಕೆನರಾ ಛೇಂಬರ್ಸ್ ಅಧ್ಯಕ್ಷ ಜೀವನ್ ಸಲ್ದಾನ, ಗೌತಮ್ ಹೆಗ್ಡೆ, ಮಂಜುನಾಥ ನಿಸರ್ಗ, ಅಪರ ಜಿಲ್ಲಾಧಿಕಾರಿ ಕುಮಾರ್, ಪ್ರೊಬೆಶನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ಕುಮಾರ್ ಕಲ್ಕೂರ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ತೇಜಮೂರ್ತಿ ಉಪಸ್ಥಿತರಿದ್ದರು.
‘ಮುಂದಿನ ವರ್ಷ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್’
ಮೇ ತಿಂಗಳಲ್ಲಿ ಸಸಿಹಿತ್ಲು ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್ ಸ್ಪರ್ಧೆ ಆಯೋಜಿಸ ಲಾಗುವುದು ಎಂದು ಇಂಡಿಯನ್ ಸರ್ಫಿಂಗ್ ಕ್ಲಬ್‌ನ ಅಧ್ಯಕ್ಷ ಕಿಶೋರ್ ತಿಳಿಸಿದ್ದಾರೆ.
ಈ ಸ್ಪರ್ಧೆಯಲ್ಲಿ 16 ದೇಶಗಳ ಸರ್ಫಿಂಗ್ ಪಟುಗಳು ಭಾಗವಹಿ ಸಲಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್ ಸ್ಪರ್ಧೆ ನಡೆಯುತ್ತಿದೆ ಎಂದರು.





