ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಮತದಾನ ಆರಂಭ

ಬೆಂಗಳೂರು, ಸೆ.28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೇಯರ್ ಮತ್ತು ಉಪಮೇಯರ‍್ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದೆ.
ಕೆಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ನೇತೃತ್ಪದಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದೆ. ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಮೊದಲು ಬಿಜೆಪಿ ಅಭ್ಯರ್ಥಿ ಡಿ.ಎಚ್. ಲಕ್ಷ್ಮೀ ಪರ ಮತ ಚಲಾವಣೆಯಾಗಿದೆ.ಕೈ ಎತ್ತುವ ಮೂಲಕ ಮತ ಚಲಾವಣೆಯಾಗಿದೆ.
ಕಾಂಗ್ರೆಸ್– ಜೆಡಿಎಸ್ ಮೈತ್ರಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದೆ.
197 ಪಾಲಿಕೆ ಸದಸ್ಯರು, 28ಎಂಎಲ್ಎ, 28ಎಂಎಲ್ಸಿ, 11 ರಾಜ್ಯಸಭಾ ಸದಸ್ಯರು, 5 ಲೋಕಸಭಾ ಸದಸ್ಯರು ಸೇರಿದಂತೆ 269 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ
Next Story





