ಹಿರಿಯ ಐಎಎಸ್ ಅಧಿಕಾರಿ ಡಾ. ಸುಭಾಷ್ ಚಂದ್ರ ಕುಂಟಿಯಾ ರಾಜ್ಯ ಸರಕಾರದ ನೂತನ ಮುಖ್ಯ ಕಾರ್ಯದರ್ಶಿ

ಬೆಂಗಳೂರು, ಸೆ.28: ಹಿರಿಯ ಐಎಎಸ್ ಅಧಿಕಾರಿ ಡಾ.ಸುಭಾಷ್ ಚಂದ್ರ ಕುಂಟಿಯಾ ರಾಜ್ಯ ಸರಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಅರವಿಂದ್ ಜಾಧವ್ ಅಧಿಕಾರದ ಅವಧಿ ಸೆ.30ರಂದು ಕೊನೆಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಭಾಷ್ ಚಂದ್ರ ಕುಂಟಿಯಾ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದಾರೆ.ಕೇಂದ್ರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಸುಭಾಷ್‌ಚಂದ್ರ ಕುಂಟಿಯಾ 1981ರ ಬ್ಯಾಚ್‌ನ ಐಎಎಸ್ ಅಧಿಕಾರಿ. 59ರ ಹರೆಯದ ಕುಂಟಿಯಾ ಮೂಲತ: ಒಡಿಶಾದವರು. ಕರ್ನಾಟಕ ಕೇಡರ್ ಅಧಿಕಾರಿ ಕುಂಟಿಯಾ 2013ರಲ್ಲಿ ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದರು.
Next Story





