Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ...

ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ28 Sept 2016 4:25 PM IST
share
ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಬೆಳ್ತಂಗಡಿ, ಸೆ.28: ಯೋಗ ಶಿಕ್ಷಕರಿಗೆ ಇಂದು ಜಗತ್ತಿನಾದ್ಯಂತ ಬೇಡಿಕೆ ಇದೆ. ಹೀಗಾಗಿ ಕೇಂದ್ರ ಸರಕಾರ ಅವರಿಗೆ ವಿಶೇಷ ಪ್ರಮಾಣ ಪತ್ರ ನೀಡಲಿದೆ ಎಂದು ಕೇಂದ್ರ ಆಯುಷ್ ಮಂತ್ರಾಲಯದ ಕಾರ್ಯದರ್ಶಿ ಅಜಿತ್ ಎಂ. ಶರಣ್ ಹೇಳಿದರು.

ಅವರು ಬುಧವಾರ ಉಜಿರೆ ಶ್ರೀ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ 23 ನೇ ಪದವಿ ಪ್ರದಾನ ಸಮಾರಂಭದಲ್ಲಿ 10 ಸ್ನಾತಕೋತ್ತರ, 71 ಪದವಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪದವಿ ಪ್ರದಾನಿಸಿ ಮಾತನಾಡಿದರು.

ಆಯುಷ್ ಸಚಿವಾಲಯ ಪ್ರಕೃತಿ ಹಾಗೂ ಯೋಗ ವಿಜ್ಞಾನದ ಬೆಳವಣಿಗೆಗೆ ಎಲ್ಲಾ ರೀತಿಯಲ್ಲಿ ಕ್ರಮಕೈಗೊಳ್ಳಲು ಸಕಲ ರೂಪುರೇಷೆಗಳನ್ನು ಸಿದ್ದಗೊಳಿಸಿ ಕಾರ್ಯರೂಪಕ್ಕಿಳಿದಿದೆ. ಈ ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗೋಸ್ಕರ ಈಗಾಗಲೇ ರಾಜ್ಯದ ನಾಗಮಂಗಲದಲ್ಲಿ ಕೇಂದ್ರೀಯ ಸಂಶೋಧನಾ ಕೇಂದ್ರವನ್ನು ಆರಂಭಿಸಿದ್ದು ಮೊದಲ ಹಂತದ ಕಾರ್ಯ ಮುಗಿದಿದೆ. ಸಂಶೋಧಕರಿಗೆ ಫೆಲೋಶಿಪ್ ನೀಡಲಾಗುತ್ತದೆ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಚಿಕಿತ್ಸೆಯನ್ನು ನೀಡುವ ಆಸ್ಪತ್ರೆಗಳಿಗೆ ಎಕ್ರಿಡಿಯೇಶನ್ ನೀಡಲಾಗುತ್ತದೆ. ಸಚಿವಾಲಯವು ಈ ಕ್ಷೇತ್ರದಲ್ಲಿರುವ ವೈದ್ಯರುಗಳ ಪಟ್ಟಿಯನ್ನು ಸಿದ್ದಮಾಡಲಿದೆ. ಮಧುಮೇಹ ಹಾಗೂ ಕ್ಯಾನ್ಸರ್‌ಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಪರಿಣಾಮಕಾರಿಯಾಗುವಂತೆ ಸಂಶೋಧನೆ ಅಗತ್ಯವಿದೆ ಎಂದ ಅವರು ಯೋಗ ಶಿಕ್ಷಕರನ್ನು ಗುರುತಿಸುವ ಉದ್ದೇಶದಿಂದ ಅವರಿಗೆ ಪ್ರಮಾಣ ಪತ್ರ ನೀಡುವ ಯೋಜನೆ ಸಿದ್ದಗೊಂಡಿದೆ. ಈ ಪ್ರಮಾಣ ಪತ್ರ ಅಂತರಾಷ್ಟ್ರೀಯ ಮಟ್ಟದಲ್ಲೂ ಉಪಯೋಗಕರವಾಗಲಿದೆ ಎಂದರು.

ಕಲಿಯುವಿಕೆ ಎಂಬುದು ನಿರಂತರ ಪ್ರಕ್ರಿಯೆ. ಜೀವನದ ಪ್ರತಿಯೊಂದು ಕ್ಷಣದಲ್ಲೂ ಕಲಿಕೆಯ ಅಂಶಗಳಿರುತ್ತವೆ. ಇದಕ್ಕಾಗಿ ನಮ್ಮ ಕಣ್ಣುಗಳನ್ನು ತೆರೆದಿಡಬೇಕು ಮತ್ತು ಸದಾ ಕುತೂಹಲಿಗರಾಗಿರಬೇಕು. ಇದರಿಂದ ಸ್ವಂತಕ್ಕೆ ಮತ್ತು ನಾವು ಕೈಗೊಳ್ಳುವ ಕಾರ್ಯಕ್ಕೆ ಲಾಭವಾಗುತ್ತದೆ. ಪದವಿ ಪಡೆದ ನಂತರ ನಿಮ್ಮ ಪಯಣ ಮುಗಿಯುವುದಿಲ್ಲ. ಇಲ್ಲಿಂದ ಅದು ಆರಂಭವಾಗುತ್ತದೆ. ನಿಮ್ಮದೇ ಆದ ಪ್ರಭಾವಲಯವನ್ನು ನಿರ್ಮಿಸಿಕೊಳ್ಳಬೇಕು. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ವಿಚಾರದಲ್ಲಿ ದೇಶದಲ್ಲೇ ಮೊದಲು ಆರಂಭವಾದ ಈ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ನೀವು ಪುಣ್ಯವಂತರು ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಶ್ಲಾಘಿಸಿದರು.

ಆಯುಷ್ ಮಂತ್ರಾಲಯದ ಜಂಟಿ ಸಲಹೆಗಾರ ಡಾ.ಈಶ್ವರ್ ಎನ್. ಆಚಾರ್ಯ, ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಪ್ರಭಾಕರ್, ಕಾರ್ಯದರ್ಶಿ ಡಾ.ಬಿ.ಯಶೋವರ್ಮ ವೇದಿಕೆಯಲ್ಲಿದ್ದರು.

ವಿವಿಧ ಸಂಸ್ಥೆಗಳಿಂದ ಕೊಡಮಾಡುವ ವಿದ್ಯಾರ್ಥಿ ವೇತನಗಳನ್ನು ವಿತರಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಡಾ. ರಾಜೇಶ್ ಕೆ.ಸಿಂಗ್ ಸಂಪಾದಿಸಿದ ಕೃತಿಯೊಂದನ್ನು ಬಿಡುಗಡೆ ಮಾಡಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಯೋಗ ವಿಭಾಗದ ಡೀನ್ ಡಾ.ಶಿವಪ್ರಸಾದ್ ಶೆಟ್ಟಿ ವಂದಿಸಿದರು. ಡಾ.ಚಂದ್ರಕಾಂತ್ ಕೆ.ಕೆ.ಮತ್ತು ಜ್ಯೋತ್ಸ್ನಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X