ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಹುಬ್ಬಳ್ಳಿ, ಸೆ.28: ಹಳೆದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಕಲಘಟಗಿ ತಾಲೂಕಿನ ತಾವರಗೇರಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ನಾಗಪ್ಪದ್ಯಾವಪ್ಪನವರ(45) ಎಂದು ಗುರುತಿಸಲಾಗಿದೆ.
ನಾಗಪ್ಪ ತನ್ನ ಮನೆ ಮುಂದೆ ಕುಳಿತಿದ್ದಾಗ ದಾಳಿ ನಡೆಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆಗೆ ಹಳೆ ವೈಷಮ್ಯವೇ ಕಾರಣ ಎನ್ನಲಾಗುತ್ತಿದೆ.
ಈ ಕುರಿತಂತೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ.
Next Story





