6 ವರ್ಷಗಳ ಬಳಿಕ ಶರಣಾಗಿದ್ದ ಆರೋಪಿಗೆ ಜಾಮೀನು

ಪುತ್ತೂರು, ಸೆ.28: ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಆರು ವರ್ಷಗಳ ಬಳಿಕ ನ್ಯಾಯಾಲಯಕ್ಕೆ ಶರಣಾಗಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಆರೋಪಿಗೆ ಇದೀಗ ಪುತ್ತೂರು ನ್ಯಾಯಾಲಯ ಜಾಮೀನು ನೀಡಿದೆ.
ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಕೂರ್ನಡ್ಕ ನಿವಾಸಿ ಅಬ್ದುಲ್ ಬಶೀರ್ ಆರು ವರ್ಷಗಳ ಬಳಿಕ ನ್ಯಾಯಾಲಯಕ್ಕೆ ಹಾಜರಾದ ಆರೋಪಿ.
2009ರಲ್ಲಿ ನಡೆದಿದ್ದ ಹಲ್ಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಅಬ್ದುಲ್ ಬಶೀರ್ ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕೆ ಪುತ್ತೂರು ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು. ಕೆಲ ದಿನಗಳ ಹಿಂದೆ ಆರೋಪಿಯು ನ್ಯಾಯಾಲಯಕ್ಕೆ ಶರಣಾಗಿದ್ದ ವೇಳೆ ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಇದೀಗ ಆರೋಪಿಗೆ ಜಾಮೀನು ನೀಡಿದೆ.
ಆರೋಪಿ ಪರವಾಗಿ ವಕೀಲರಾದ ಅಶ್ರಫ್ ಅಗ್ನಾಡಿ, ಮಜೀದ್‌ಖಾನ್, ರಹ್ಮಾನ್ ಬಂಡಾಡಿ ವಾದಿಸಿದ್ದರು.
Next Story





