Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು...

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮಾಹಿತಿ ಸಂಗ್ರಹ

ಖಾಸಗಿ ಬೋರ್‌ವೆಲ್-ಬಾವಿಗಳಿಂದ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Sept 2016 10:16 PM IST
share
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮಾಹಿತಿ ಸಂಗ್ರಹ

ಚಿಕ್ಕಮಗಳೂರು, ಸೆ.29: ಮಳೆ ಕೊರತೆಯಿಂದ ತಲೆದೋರಿರುವ ಬರಪರಿಸ್ಥಿಯನ್ನು ಎದುರಿಸಲು ಖಾಸಗಿಯಾಗಿ ಬೋರ್‌ವೆಲ್ ಮತ್ತು ಬಾವಿ ನಿರ್ಮಾಣ ಮಾಡಿರುವವರಿಂದ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸಲು ಕೆಲವು ವ್ಯಕ್ತಿಗಳನ್ನು ಮನವೊಲಿಸುವ ಪ್ರಯತ್ನ ಮಾಡಲಾಗಿದೆ ಎಂದು ಶಾಸಕ ಬಿ.ಬಿ.ನಿಂಗಯ್ಯ ತಿಳಿಸಿದ್ದಾರೆ.

ಅವರು ಇಂದು ಅಂಬಳೆ ಹೋಬಳಿಯ ಮಳಲೂರಿನಲ್ಲಿ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತು ಹಮ್ಮಿಕೊಳ್ಳಲಾದ ಮಾಹಿತಿ ಸಂಗ್ರಹ ಸಭೆಯಲ್ಲಿ ಮಾತನಾಡಿದರು. ಮಳೆ ಕೊರತೆಯಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಹೊಲ ಗದ್ದೆಗಳು ಬರಿದಾಗಿ ಬೆಳೆಗಳು ಒಣಗಿ ನಿಂತಿದೆ. ಇಂತಹ ಸಂದರ್ಭದಲ್ಲಿ ನೀರಿನ ಸಮಸ್ಯೆ ಕುರಿತು ಅ. 8ರಂದು ಜಿಪಂ ನಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರಸ್ತಾಪಿಸಿ ಸಮಸ್ಯೆ ಪರಿಹರಿಸುವ ಸಲುವಾಗಿ, ಮಾಹಿತಿ ಸಂಗ್ರಹಿಸಲು ಗ್ರಾಮಗಳಿಗೆ ತೆರಳಿ ವಾಸ್ತವ ಸ್ಥಿತಿ ಅರಿಯಲು ಪ್ರವಾಸ ಮಾಡಲಾಗುತ್ತಿದೆ ಎಂದರು.

ಖಾಸಗಿಯವರ ಬಾವಿ ಮತ್ತು ಬೋರ್‌ವೆಲ್‌ಗಳ ಬಗ್ಗೆ ಮಾಹಿತಿ ಕಲೆಹಾಕಿ ಪಟ್ಟಿಮಾಡಬೇಕು. ಸ್ಥಳೀಯವಾಗಿ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸಲು ಅವರನ್ನು ಮನವೊಲಿಸುವ ವಿಶೇಷ ಪ್ರಯತ್ನ ಮಾಡಲಾಗಿದೆ. ಕೆಲವರು ನೀರು ಕೊಡಲು ಒಪ್ಪಿದ್ದಾರೆ. ರೈತರು ಈ ವರ್ಷದ ಕಂದಾಯ ರದ್ದುಮಾಡಲು ಹಾಗೂ ಸಾಲ ಮನ್ನಾ ಮಾಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಸರಕಾರದೊಂದಿಗೆ ಮಾತನಾಡಿ ಮುಂದಿನ ಕ್ರಮ ಜರಗಿಸಲಾಗುವುದು ಎಂದು ಹೇಳಿದರು.

ಹಾದಿಹಳ್ಳಿ, ಹಳುವಳ್ಳಿ, ಗಂಜಲಗೋಡು ಸೇರಿದಂತೆ ಅಂಬಳೆ ಹೋಬಳಿಯ ಕೆಲವೊಂದು ಗ್ರಾಮಗಳಲ್ಲಿ ಬೋರ್‌ವೆಲ್ ನಿರ್ಮಾಣ ಮಾಡಿ ನೀರು ಪೂರೈಸಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಅಗತ್ಯವಿರುವ ಕಡೆ ಬೋರ್‌ವೆಲ್ ನಿರ್ಮಿಸಿ, ಬೋರ್ ಇರುವ ಕಡೆ ನೀರಿಲ್ಲದಿದ್ದರೆ ರೀ ಕಂಡೀಶನ್ ಮಾಡಿ, ಅದು ಸಾಧ್ಯವಿಲ್ಲದಿದ್ದರೆ ತುರ್ತಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶುಂಠಿ ಬೆಳೆಗಾರರಿಗೆ ಎಚ್ಚರಿಕೆ : ಕ್ಷೇತ್ರದಲ್ಲಿರುವ ಕೆರೆಗಳ ಸುತ್ತಮುತ್ತ ಬೆಳೆದ ಶುಂಠಿ ಬೆಳೆಗಾರರರು ಕೆರೆ ನೀರನ್ನು ಶುಂಠಿಬೆಳೆಗೆ ಪಂಪ್ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ದೂರಿದ್ದಾರೆ. ಅಕ್ರಮವಾಗಿ ಶುಂಠಿಗೆ ನೀರು ಹಾಯಿಸುತ್ತಿರುವುದು ಸರಿಯಲ್ಲ. ಕೂಡಲೇ ಇಂತಹ ಕೆಲಸ ಮಾಡುತ್ತಿರುವವರು ನಿಲ್ಲಿಸಬೇಕು. ಕೆರೆ ನೀರನ್ನು ಶುಂಠಿಗೆ ಪಂಪ್‌ಮಾಡುತ್ತಿರುವುದನ್ನು ಕಂಡರೆ ಕ್ರಮ ಜರಗಿಸಲಾಗುವುದು ಎಂದರು.

ತಾಪಂ ಸದಸ್ಯ ಕೆ.ಯು.ಮಹೇಶ್, ಗ್ರಾಪಂ ಸದಸ್ಯರಾದ ವನಿತಾ, ಕೃತಿಕಾ, ಹೊಯ್ಸಳ, ಪಾಪು, ಜಿಪಂ ಇಂಜಿನಿಯರ್ ಆನಂದ್, ಪಿಡಿಒ ಮಂಜುನಾಥ ಗೌಡ, ಇಒ ಸುಂದರೇಶ್, ಸಮಾಜ ಕಲ್ಯಾಣಾಧಿಕಾರಿ ರೇವಣ್ಣ, ಕೃಷಿ ಅಧಿಕಾರಿ ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X