ಕಂಚಿನಬಾಗಿಲ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿ

ಅಂಕೋಲಾ,ಸೆ.29: ರಾ.ಹೆ.63 ಕಂಚಿನಬಾಗಿಲ ಸಮೀಪ ಮಂಗಳೂರಿನಿಂದ ಸೊಲ್ಲಾಪುರಕ್ಕೆ ತೆರಳುವ ಗ್ಯಾಸ್ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿಪಲ್ಟಿಯಾದ ಘಟನೆ ಗುರುವಾರ ಮಧ್ಯಾಹ್ನ 1:30ರ ಸುಮಾರಿಗೆ ನಡೆದಿದೆ. ಇದರಿಂದಾಗಿ ಯಾವುದೇ ಅನಾಹುತ ಸಂಭವಿಸಿಲ್ಲ. ಪಿಎಸೈ ಎಚ್.ಓಂಕಾರಪ್ಪ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
ಲಾರಿ ಚಾಲಕ ಮತ್ತು ಕ್ಲೀನರ್‌ಗೆ ಲಘು ಗಾಯವಾಗಿದ್ದು, ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Next Story





