ನಾಳೆಯಿಂದ ರಾಜ್ಯಮಟ್ಟದ ದಸರಾ ಕ್ರೀಡಾಕೂಟ
ಮಂಗಳೂರು, ಸೆ.29: ಕರ್ನಾಟಕ ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವುಗಳ ಸಂಯುಕ್ತಾಶ್ರಯದಲ್ಲಿ 2016-17ನೆ ಸಾಲಿನ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟವು ಅ.1ರಿಂದ 4ರವರೆಗೆ ಮೈಸೂರಿನಲ್ಲಿ ನಡೆಯಲಿದೆ. ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದವರು ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿದ್ದು, ಕುಸ್ತಿ ಸ್ಪರ್ಧೆಯಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ನೇರವಾಗಿ ಕೂಟದಲ್ಲಿ ಭಾಗವಹಿಸಬಹುದಾಗಿದೆ.
ಸ್ಪರ್ಧಾಳುಗಳು ಅ.1ರಂದು ಬೆಳಗ್ಗೆ 8ರೊಳಗೆ ಶ್ರೀನಂಜರಾಜ ಬಹದ್ದೂರ್ ಛತ್ರ, ವಿನೋಬಾ ರಸ್ತೆ, ಮೈಸೂರು ಇಲ್ಲಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು (0824-2451264) ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





