‘ಕ್ರೈಸ್ತ ಸಮುದಾಯದ ಅಭಿವೃದ್ಧಿ: 300 ಕೋ.ರೂ. ಬೇಡಿಕೆ’
ಮಂಗಳೂರು, ಸೆ.29: ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 2017-18ನೆ ಸಾಲಿನ ಬಜೆಟ್‌ನಲ್ಲಿ 300 ಕೋ.ರೂ. ಒದಗಿಸಬೇಕು ಎನ್ನುವ ಬೇಡಿಕೆಯನ್ನು ಸಮುದಾಯ ಸರಕಾರದ ಮುಂದಿಟ್ಟಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ, ಕ್ರೈಸ್ತ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಐವನ್ ಡಿಸೋಜ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿಯ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದಲ್ಲಿ ಕ್ರೈಸ್ತ ಸಮುದಾಯ ಅಧಿಕವಿರುವ ಜಿಲ್ಲೆಗಳಿಗೆ ಪ್ರವಾಸ ಮಾಡಲಾಗಿದೆ. ಈ ಸಂದರ್ಭ ಸಮುದಾಯದ ಜನರಿಂದ ಬಂದಿರುವ ಬೇಡಿಕೆಯನ್ನು ಮುಖ್ಯಮಂತ್ರಿಯ ಮುಂದಿಡಲಾಗಿದೆ.ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತ ಇಲಾಖೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ವಕ್ಫ್ ಕಚೇರಿಗಳು ಒಂದೇ ಸೂರಿನಡಿ ಕಾರ್ಯಾಚರಿಸುವಂತೆ ಪಾಂಡೇಶ್ವರ ದಲ್ಲಿ 3 ಅಂತಸ್ತಿನ ಕಟ್ಟಡದ ಕಾಮಗಾರಿಗೆ 2 ಕೋಟಿ ರೂ. ಬಿಡುಗಡೆಯಾಗಿದೆ. 1 ಕೋಟಿ 75 ಲಕ್ಷ ರೂ. ಖರ್ಚಾಗಿದೆ. 1 ಕೋಟಿ 25 ಲಕ್ಷ ರೂ.ಗಳಿಗೆ ಬೇಡಿಕೆ ಇಡಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ನಾಗೇಂದ್ರ ಕುಮಾರ್ ಉಪಸ್ಥಿತರಿದ್ದರು.





