Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 8 ಭಾರತೀಯ ಯೋಧರ ಹತ್ಯೆ; ಓರ್ವನ ಸೆರೆ

8 ಭಾರತೀಯ ಯೋಧರ ಹತ್ಯೆ; ಓರ್ವನ ಸೆರೆ

ಪಾಕಿಸ್ತಾನದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ30 Sept 2016 12:21 AM IST
share

ಮುರಫ್ಫರ್‌ಬಾದ್, ಸೆ.29: ಟಟ್ಟಾ ಪಾನಿ ಎಂಬಲ್ಲಿನ ನಿಯಂತ್ರಣ ರೇಖೆಯ ಬಳಿ ಭಾರತೀಯ ಪಡೆಗಳು ಗುರುವಾರ ನಡೆಸಿದ ಗುಂಡಿನ ದಾಳಿಗೆ ಉತ್ತರವಾಗಿ ದೇಶದ ಸೇನೆ ನಡೆಸಿದ ಪ್ರತಿದಾಳಿಯಲ್ಲಿ 8 ಭಾರತೀಯ ಯೋಧರನ್ನು ಹತ್ಯೆ ಮಾಡಿದ್ದು ಒಬ್ಬ ಯೋಧನನ್ನು ಸೆರೆ ಹಿಡಿಯಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಪಾಕಿಸ್ತಾನದ ‘ಡಾನ್’ ಪತ್ರಿಕೆಯನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ಇದನ್ನು ವರದಿ ಮಾಡಿದೆ. ಘಟನೆಯಲ್ಲಿ ಇಬ್ಬರು ಪಾಕ್ ಸೈನಿಕರು ಮರಣ ಹೊಂದಿದ್ದಾರೆ . ಸೆರೆಸಿಕ್ಕ ಯೋಧ ಮಹಾರಾಷ್ಟ್ರ ಮೂಲದ ಚಂದು ಬಾಬೂಲಾಲ್ ಚೌಹಾಣ್‌ನನ್ನು ಅಜ್ಞಾತ ಸ್ಥಳವೊಂದಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪಾಕ್ ಮೂಲಗಳು ತಿಳಿಸಿವೆ. ಜಿಯೋ ನ್ಯೂಸ್‌ನ ‘ಕ್ಯಾಪಿಟಲ್ ಟಾಕ್’ ಕಾರ್ಯಕ್ರಮದಲ್ಲಿ ಪತ್ರಕರ್ತ ಹಮೀದ್ ಮೀರ್, ಎರಡು ಕಡೆ ನಡೆದ ಗುಂಡಿನ ಕಾಳಗದಲ್ಲಿ 14 ಮಂದಿ ಭಾರತೀಯ ಯೋಧರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದಾಗ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿವೃತ್ತ ಮೇಜರ್ ಜನರಲ್ ಇಜಾಝ್ ಅಹ್ಮದ್ ಈ ಮಾತನ್ನು ಪುಷ್ಟೀಕರಿಸಿದರು.

   ಕದನದ ಕಣದಲ್ಲಿ ಬಿದ್ದಿರುವ ಯೋಧರ ಮೃತದೇಹಗಳನ್ನು ಪಡೆಯಲು ಭಾರತೀಯ ಸೇನಾ ಪಡೆಗೆ ಇನ್ನೂ ಸಾಧ್ಯವಾಗಿಲ್ಲ ಎಂದು ಪಾಕ್ ಸೇನಾ ಮೂಲಗಳು ತಿಳಿಸಿವೆ. ಆಝಾದ್ ಕಾಶ್ಮೀರಕ್ಕೆ ಸೇರಿದ ಭಿಂಬೇರ್, ಹಾಟ್‌ಸ್ಪ್ರಿಂಗ್, ಕೇಲ್ ಮತ್ತು ಲಿಪಾ ವಲಯಗಳಲ್ಲಿ ಗುರುವಾರ ಮುಂಜಾನೆ 2.30ರಿಂದ 8 ಗಂಟೆಯವರೆಗೆ ಉಭಯ ದೇಶಗಳ ಯೋಧರ ಮಧ್ಯೆ ಗುಂಡಿನ ದಾಳಿ ನಡೆದಿದ್ದು ಭಾರತೀಯ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಸೂಕ್ತ ಪ್ರತ್ಯುತ್ತರ ನೀಡಲಾಗಿದೆ. ಈ ಘಟನೆಯ ಬಳಿಕ ಭಾರತದ ವಿದೇಶ ವ್ಯವಹಾರ ಇಲಾಖೆಯ ಸಚಿವರು, ರಕ್ಷಣಾ ಸಚಿವರು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ, ನಿಯಂತ್ರಣ ರೇಖೆಯ ಒಳನುಗ್ಗಿ ಭಾರತೀಯ ಪಡೆಗಳು ನಡೆಸಿದ ಸರ್ಜಿಕಲ್ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದರು. ಇದೊಂದು ಅಸಂಬದ್ಧ ಹೇಳಿಕೆ ಎಂದು ತಳ್ಳಿಹಾಕಿರುವ ಪಾಕಿಸ್ತಾನ, ಗಮನ ಬೇರೆಡೆ ಸೆಳೆಯಲು ಭಾರತೀಯರು ಹೆಣೆದ ಕಟ್ಟುಕಥೆ ಎಂದಿದೆ. ಪಾಕಿಸ್ತಾನದ ವಾಯುಕ್ಷೇತ್ರ ಸುರಕ್ಷಿತವಾಗಿದ್ದು ಯಾವುದೇ ವಿದೇಶಿ ಆಕ್ರಮಣವನ್ನು ಎದುರಿಸಲು ಪಾಕಿಸ್ತಾನ ವಾಯುಪಡೆ ಸನ್ನದ್ಧವಾಗಿದೆ ಎಂದು ಪಾಕಿಸ್ತಾನ ತಿಳಿಸಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X