ರಾಜ್ಯಕ್ಕೆ ತಜ್ಞರ ತಂಡ ಕಳುಹಿಸಲು ಸುಪ್ರೀಂಗೆ ಮನವಿ: ಸಚಿವ ಎಂಬಿ ಪಾಟೀಲ್

ಬೆಂಗಳೂರು, ಸೆ.30: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆಯಲಿದ್ದು, ಎರಡೂ ರಾಜ್ಯಗಳ ಪರಿಸ್ಥಿತಿಯ ಅಧ್ಯಯನಕ್ಕೆ ನೀರಾವರಿ ತಜ್ಞರ ತಂಡ ಕಳುಹಿಸುವಂತೆ ಸುಪ್ರೀಂ ಕೊರ್ಟ್ ಗೆ ಮನವಿ ಮಾಡಲಾಗುವುದು ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
ದಿಲ್ಲಿಯಲ್ಲಿ ಇಂದು ರಾಜ್ಯದ ಪರ ವಕೀಲ ಫಾಲಿ ಎಸ್.ನಾರಿಮನ್ ಅವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಒಂದಡೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಾವೇರಿ ಕೊಳ್ಳದ ಜಲಾಶಯಗಳ ನೀರನ್ನು ಕುಡಿಯುವ ನೀರಿನ ಆವಶ್ಯಕತೆ ಬಳಸುವ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿತ್ತು. ಇನ್ನೊಂದಡೆ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿತ್ತು. ಆದರೆ ರಾಜ್ಯದಲ್ಲಿ ನೀರಿನ ಕೊರತೆ ಇದೆ. ಈ ಕಾರಣದಿಂದಾಗಿ ಈಗಿನ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ನೀಡಲು ಸಾಧ್ಯವಿಲ್ಲ ಎಂದು ಎಂಬಿ ಪಾಟೀಲ್ ತಿಳಿಸಿದರು.
ಕರ್ನಾಟಕದ ಪರ ಹಿರಿಯ ವಕೀಲರಾದ ಫಾಲಿ ಎಸ್.ನಾರಿಮನ್ ವಾದ ಮಂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
೨೦೧೩ರ ನ್ಯಾಯಾಂಗ ನಿಂದನೆ ಪ್ರಕರಣ ಇಂದು ವಿಚಾರಣೆಗೆ ಬರುವ ಸಾಧ್ಯತೆ ಇಲ್ಲ ಎಂದು ಎಂಬಿ ಪಾಟೀಲ್ ಸ್ಪಷ್ಟಪಡಿಸಿದರು.,





