ಉದ್ಯೋಗಮೇಳ ಲಾಂಛನ ಬಿಡುಗಡೆ ಅ.22ರಂದು ಬೆಂಗಳೂರಿನಲ್ಲಿ ರೋಡ್ ಶೋ: ಸಚಿವ ದೇಶಪಾಂಡೆ

ಕಾರವಾರ, ಸೆ.30: ನವೆಂಬರ್ 12 ಮತ್ತು 13ರಂದು ಕಾರವಾರದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಹೆಚ್ಚಿನ ಕಂಪೆನಿಗಳನ್ನು ಆಕರ್ಷಿಸಲು ಅಕ್ಟೋಬರ್ 22ರಂದು ಬೆಂಗಳೂರಿನಲ್ಲಿ ರೋಡ್ ಶೋ ಆಯೋಜಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು.
ಅವರು ಹಳಿಯಾಳದಲ್ಲಿ ಕಾರವಾರ ಉದ್ಯೋಗ ಮೇಳದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಇದೇ ಮೊದಲ ಬಾರಿಗೆ ಕಾರವಾರದಲ್ಲಿ ಉದ್ಯೋಗ ಮೇಳವನ್ನು ಬೃಹತ್ ಪ್ರಮಾಣದಲ್ಲಿ ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿರುವ ಎಲ್ಲ ನಿರುದ್ಯೋಗಿ ಯುವಕ ಯುವತಿಯರು ಇದರಲ್ಲಿ ಭಾಗವಹಿಸಬೇಕು. ಈಗಾಗಲೇ ಉದ್ಯೋಗದಲ್ಲಿರುವವರೂ ಉತ್ತಮ ಅವಕಾಶಗಳಿಗಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದರು.ದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕಂಪೆನಿ ಗಳು ಮತ್ತು ಅಭ್ಯರ್ಥಿಗಳು ಆನ್‌ಲೈನ್ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ 3,850 ಅಭ್ಯರ್ಥಿಗಳುತಮ್ಮ ಹೆಸರು ನೋಂದಾಯಿಸಿದ್ದಾರೆ. 83 ಪ್ರತಿಷ್ಠಿತ ಕಂಪೆನಿಗಳು ಸಹ ನೋಂದಣಿ ಮಾಡಿವೆ. ಹಲವು ಪ್ರತಿಷ್ಠಿತ ಕಂಪೆನಿಗಳಿಗೆ ಆಹ್ವಾನ ನೀಡಲಾಗಿದ್ದು, ಭಾಗವಹಿಸುವ ಇಚ್ಛೆ ವ್ಯಕ್ತಪಡಿಸಿವೆ ಎಂದರು.ಾಗಲೇ ಬೆಂಗಳೂರಿನಲ್ಲಿ ಪ್ರಮುಖ ವಾಣಿಜ್ಯ ಸಂಘಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಅಕ್ಟೋಬರ್ 22 ರಂದು ರೋಡ್ ಶೋ ಆಯೋಜಿಸಲಾಗಿದ್ದು, ಎಲ್ಲ ಪ್ರಮುಖ ಕಂಪೆನಿಗಳನ್ನು ಆಹ್ವಾನಿಸಲಾಗುವುದು. ಜಿಲ್ಲೆಯ ಜನತೆಗೆ ಉದ್ಯೋಗ ಮಾರುಕಟ್ಟೆಯಲ್ಲಿ ಗರಿಷ್ಠ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು. ಉದ್ಯೋಗ ಮೇಳದಲ್ಲಿ ಕನಿಷ್ಠ ಎಸೆಸೆಲ್ಸಿ ವಿದ್ಯಾರ್ಹತೆ ಯಿಂದ ಯಾವುದೇ ಉನ್ನತ ಶಿಕ್ಷಣ ಪಡೆದವರು ಅವಕಾಶಗಳಿಗೆ ಪ್ರಯತ್ನಿಸಬಹುದು. ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶಗಳನ್ನು ಕಂಪೆನಿಗಳು ನೀಡಲಿವೆ. ಆದರೆ, ಜಿಲ್ಲಾಡಳಿತದ ವತಿಯಿಂದ ಯಾರಿಗೂ ಉದ್ಯೋಗದ ಭರವಸೆಯನ್ನು ನೀಡುವುದಿಲ್ಲ. ಉದ್ಯೋಗ ಮೇಳದ ಮೂಲಕ ಅಭ್ಯರ್ಥಿಗಳಿಗೆ ಉದ್ಯೋಗ ಗಿಟ್ಟಿಸಿಕೊಳ್ಳಲು ಅವಕಾಶ ಮಾತ್ರ ಕಲ್ಪಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಲೋಗೊ ಬಿಡುಗಡೆ: ಕಾರವಾರ ಉದ್ಯೋಗ ಮೇಳದ ಲೋಗೊವನ್ನು ಸಚಿವರು ಈ ಸಂದರ್ಭ ಬಿಡುಗಡೆ ಮಾಡಿದರು. ಕಾರವಾರದ ಕಲಾವಿದ ಕೆ.ಎಸ್. ಅಶೋಕ್‌ಕುಮಾರ್ ಇದನ್ನು ರಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸಂತೋಷ ರೇಣಕೆ, ಕಾರವಾರ ಉಪ ವಿಭಾಗಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಪಾಲಕೃಷ್ಣ ಬೇಕಲ್ ಮತ್ತಿತರರಿದ್ದರು.





